ದೇಶ

ಕಾವೇರಿ ನೀರು ಬಿಡುವವರೆಗೂ ಕರ್ನಾಟಕ ಅರ್ಜಿಯನ್ನು ಆಲಿಸಬೇಡಿ: ಸುಪ್ರೀಂ ಗೆ ತಮಿಳುನಾಡು ಮೊರೆ

ಕಾವೇರಿ ನೀರು ಬಿಡುಗಡೆ ಮಾಡುವವರೆಗೂ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಬೇಡಿ ಎಂದು...

ಕಾವೇರಿ ನೀರು ಬಿಡುವವರೆಗೂ ಕರ್ನಾಟಕ ಅರ್ಜಿಯನ್ನು ಆಲಿಸಬೇಡಿ: ಸುಪ್ರೀಂ ಗೆ ತಮಿಳುನಾಡು ಮೊರೆ
ಸಂಗ್ರಹ ಚಿತ್ರ
Published On :
ಚೆನ್ನೈ: ಕಾವೇರಿ ನೀರು ಬಿಡುಗಡೆ ಮಾಡುವವರೆಗೂ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಶೀಲಿಸಬೇಡಿ ಎಂದು ತಮಿಳು ನಾಡು ಸರ್ಕಾರ ಸೋಮವಾರ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಕರ್ನಾಟಕದ ಅನೇಕ ನಗರಗಳ ಜನರಿಗೆ ಕುಡಿಯುವ ನೀರಿಗೆ ತತ್ವಾರವಿರುವಂತಹ ಸಂದರ್ಭದಲ್ಲಿ ಡಿಸೆಂಬರ್ ಅಂತ್ಯದವರೆಗೂ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಇಂದು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ತಮಿಳು ನಾಡು ಸರ್ಕಾರ ಅದಕ್ಕೆ ಪ್ರತಿಯಾಗಿ ಉನ್ನತ ನ್ಯಾಯಾಲಯಕ್ಕೆ ಈ ಮನವಿ ಮಾಡಿದೆ.
ಸೆಪ್ಟೆಂಬರ್ 27ರವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡು ರೈತರಿಗೆ ಸಹಾಯವಾಗಲು ಬಿಡಿ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮಾರ್ಪಾಡು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ನ್ಯಾಯಾಲಯಕ್ಕೆ ಮೊರೆ ಹೋಗಿತ್ತು.
ಕಾವೇರಿ ಜಲಾನಯನ ಪ್ರದೇಶಗಳು ಮತ್ತು ಬೆಂಗಳೂರಿಗೆ ಕುಡಿಯುವ ಉದ್ದೇಶದಿಂದ ಮಾತ್ರ ಕಾವೇರಿ ನದಿ ನೀರನ್ನು ಬಳಸಿಕೊಳ್ಳುವಂತೆ ಮೂರು ದಿನಗಳ ಹಿಂದೆ ನಡೆದ ಕಾವೇರಿ ಕುರಿತ ವಿಶೇಷ ಅಧಿವೇಶನದಲ್ಲಿ ಕರ್ನಾಟಕ ವಿಧಾನ ಸಭೆ ನಿರ್ಣಯ ಅನುಮೋದಿಸಿದ ಮೂರು ದಿನಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಇಂದು ಅರ್ಜಿ ಹಾಕಿದೆ. ಆದರೆ ಸರ್ಕಾರದ ನಿರ್ಣಯದಲ್ಲಿ ಉನ್ನತ ನ್ಯಾಯಾಲಯದ ಆದೇಶವನ್ನು ನಮೂದಿಸಿಲ್ಲ. ಅದು ತನ್ನ ಅರ್ಜಿಯಲ್ಲಿ, ತಮಿಳು ನಾಡಿಗೆ ನೀರು ಬಿಟ್ಟರೆ ಕರ್ನಾಟಕದ ಜನತೆಗೆ ಕುಡಿಯಲು ಮತ್ತು ವ್ಯವಸಾಯಕ್ಕೆ ನೀರಿಲ್ಲದಾಗುತ್ತದೆ ಎಂದು ವಿವರಿಸಿದೆ.
ತಮಿಳು ನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕಾವೇರಿ ತೀರದ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ಭಾರೀ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಆ ಘಟನೆ ಇನ್ನೂ ಜನ ಮಾನಸದಿಂದ ಮರೆಯಾಗಿಲ್ಲ. ಪ್ರಧಾನ ಮಂತ್ರಿಯವರು ಮಧ್ಯಸ್ಥಿಕೆ ವಹಿಸಿ ಎರಡೂ ರಾಜ್ಯಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಕರ್ನಾಟಕ ಮನವಿ ಮಾಡುತ್ತಾ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.