ಪಾಕ್ ಕಲಾವಿದರು ಭಯೋತ್ಪಾದಕರಲ್ಲ: ಸುರೇಶ್ ಒಬೆರಾಯ್
ಪಾಕಿಸ್ತಾನದ ಕಲಾವಿದರು ಭಯೋತ್ಪಾದಕರಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಗೆ ಬಾಲಿವುಡ್ ನಟ ಸುರೇಶ್ ಒಬೆರಾಯ್ ಅವರು ಹೇಳಿದ್ದಾರೆ...

ಕೋಝಿಕೋಡ್: ಪಾಕಿಸ್ತಾನದ ಕಲಾವಿದರು ಭಯೋತ್ಪಾದಕರಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಗೆ ಬಾಲಿವುಡ್ ನಟ ಸುರೇಶ್ ಒಬೆರಾಯ್ ಅವರು ಹೇಳಿದ್ದಾರೆ.
ದೇಶ ತೊರೆಯುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಪಾಕಿಸ್ತಾನ ಕಲಾವಿದರಿಗೆ ಬೆದರಿಕೆ ಹಾಕಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕಿಸ್ತಾನ ಕಲಾವಿದರು ಯಾವ ತಪ್ಪು ಮಾಡಿದ್ದಾರೆ? ಅವರನ್ನು ದೇಶದಿಂದ ಹೊರಹಾಕುವುದಕ್ಕೆ. ಪಾಕಿಸ್ತಾನ ಕಲಾವಿದರೇನು ಭಯೋತ್ಪಾದಕರಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರದ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ನಡೆದ ಉಗ್ರರ ದಾಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯು, ಭಾರತದಲ್ಲಿರುವ ಪಾಕಿಸ್ತಾನ ಕಲಾವಿದರು ಕೂಡಲೇ ದೇಶವನ್ನು ಬಿಟ್ಟು ಹೋಗುವಂತೆ ಕರೆ ನೀಡಿತ್ತು. ಅಲ್ಲದೆ, 48 ಗಂಟೆಗಳ ಗಡುವನ್ನೂ ನೀಡಿತ್ತು. ಈ ಬೆದರಿಕೆ ಕರೆಗೆ ಬಿ-ಟೌನ್ ನಿಂದ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


