ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟುಹಬ್ಬ: ಮೋದಿಯಿಂದ ಶುಭಾಶಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 83ನೇ ಜನ್ಮ ದಿನದ ಪ್ರಯುಕ್ತ ಪ್ರಧಾನ...

Published On :
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 83ನೇ ಜನ್ಮ ದಿನದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
ಡಾ.ಮನಮೋಹನ್ ಸಿಂಗ್ ಜಿಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ದೀರ್ಘಾವಧಿಯ ಆರೋಗ್ಯ ಕರುಣಿಸಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೋದಿಯವರು ಖುದ್ದಾಗಿ ಮನಮೋಹನ್ ಸಿಂಗ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಶುಭಾಶಯ ತಿಳಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಸಚಿವಾಲಯ ಟ್ವೀಟ್ ಮಾಡಿದೆ.
2004ರಿಂದ 2014ರವರೆಗೆ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಹುಟ್ಟಿದ್ದು ಇಂದಿನ ಪಾಕಿಸ್ತಾನದ ಗಹ್ ಎಂಬ ಸಣ್ಣ ಪಟ್ಟಣದಲ್ಲಿ. 1947ರಲ್ಲಿ ವಿಭಜನೆ ಸಂದರ್ಭದಲ್ಲಿ ಸಿಂಗ್ ಅವರ ಕುಟುಂಬ ಭಾರತಕ್ಕೆ ವಲಸೆ ಬಂದು ನೆಲೆಸಿತು. ಅರ್ಥಶಾಸ್ತ್ರದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಸಿಂಗ್ 1966-69ರವರೆಗೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡಿದ್ದರು. ನಂತರ ವಿದೇಶಾಂಗ ವ್ಯವಹಾರ ಸಚಿವಾಲಯದಲ್ಲಿ ಸಲಹೆಗಾರರಾಗಿದ್ದರು.
ಅವರು 70 ಮತ್ತು 80ನೇ ದಶಕಗಳಲ್ಲಿ ಭಾರತ ಸರ್ಕಾರದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. 1972ರಿಂದ 76ರವರೆಗೆ ಮುಖ್ಯ ಆರ್ಥಿಕ ಸಲಹೆಗಾರರಾಗಿ, 1982ರಲ್ಲಿ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಕೆಲಸ ಮಾಡಿದ್ದರು. ನಂತರ 1987ರವರೆಗೆ ಯೋಜನಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದರು. 1991-92ರಲ್ಲಿ ಹಣಕಾಸು ಸಚಿವರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


