ಉರಿ ಉಗ್ರ ದಾಳಿ: ಪಾಕ್ ಹೈಕಮಿಷನರ್ ಗೆ ಸಾಕ್ಷ್ಯ ಸಲ್ಲಿಸಿದ ಭಾರತ
ವಿದೇಶಾಂಗ ಕಾರ್ಯದರ್ಶಿಗಳು ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸೀತ್ ಅವರನ್ನು ಕರೆಯಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ...

Published On :
ನವದೆಹಲಿ: ವಿದೇಶಾಂಗ ಕಾರ್ಯದರ್ಶಿಗಳು ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸೀತ್ ಅವರನ್ನು ಕರೆಯಿಸಿಕೊಂಡು ಜಮ್ಮು ಮತ್ತು ಕಾಶ್ಮೀರದ ಉರಿ ಉಗ್ರ ದಾಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ಮಂಗಳವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಭಾರತದ ವಿರುದ್ಧ ಗಡಿಯಲ್ಲಿ ನಡೆಯುತ್ತಿರುವ ಉಗ್ರ ದಾಳಿಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ವಿದೇಶಾಂಗ ಕಾರ್ಯದರ್ಶಿಗಳು, ಉರಿ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ ಉಗ್ರರ ಬಗ್ಗೆ ಮಾಹಿತಿ ನೀಡುವಂತೆ ಬಸೀತ್ ಗೆ ಸೂಚಿಸಿದ್ದಾರೆ.
ಭಾರತೀಯ ಸೇನೆಯ ೧೮ ಯೋಧರನ್ನು ಹತ್ಯೆ ಮಾಡಿದ ಉಗ್ರರು ಪಾಕಿಸ್ಥಾನಕ್ಕೆ ಸೇರಿದವರೇ ಎಂದು ಭಾರತ ಈ ಹಿಂದೆ ಹಲವು ಬಾರಿ ಹೇಳಿದೆ. ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು, ಭಾರತ ಯಾವುದೇ ಸಾಕ್ಷ್ಯಾಧರಗಳಿಲ್ಲದೆ ಆರೋಪ ಮಾಡುತ್ತಿದೆ ಎಂದಿದ್ದರು.
ಹತ ಪಾಕ್ ಉಗ್ರರಿಂದ ವಶಪಡಿಸಿಕೊಳ್ಳಲಾಗಿರುವ ಜಿಪಿಎಸ್, ಗ್ರೆನೇಡ್‌ಗಳು, ಸಂಪರ್ಕ ಉಪಕರಣಗಳು, ಆಹಾರದ ಪ್ಯಾಕೇಟ್‌ಗಳು, ಔಷಧಿಗಳು ಹಾಗೂ ಬಟ್ಟೆ ಬರೆಗಳು ಪಾಕಿಸ್ಥಾನದ ಚಿಹ್ನೆಯನ್ನು ಹೊಂದಿದ್ದು ಇವೆಲ್ಲವುಗಳ ಆಧಾರದಲ್ಲಿ ಉಗ್ರರು ಪಾಕಿಸ್ಥಾನದವರೇ ಆಗಿರುವುದು ದೃಢಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


