ಉರಿ ಹುತಾತ್ಮ ಯೋಧರಿಗೆ ಅಪಮಾನ: ಕಾಂಗ್ರೆಸ್ ರ್ಯಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ!
ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿಯಿಂದ ದೇಶಕ್ಕೆ ದೇಶವೇ ಪಾಕಿಸ್ತಾನ ವಿರುದ್ಧ ಸಿಡಿದೆದ್ದಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಮಾತ್ರ...

Published On :
ಮೊರಾದಾಬಾದ್(ಉತ್ತರಪ್ರದೇಶ): ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ಉಗ್ರರ ದಾಳಿಯಿಂದ ದೇಶಕ್ಕೆ ದೇಶವೇ ಪಾಕಿಸ್ತಾನ ವಿರುದ್ಧ ಸಿಡಿದೆದ್ದಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಮಾತ್ರ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಭಾರತೀಯರ ಸ್ವಾಭಿಮಾನವನ್ನು ಅವಮಾನಿಸಿದ್ದಾರೆ.
ಉರಿ ದಾಳಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾಂಗ್ರೆಸ್ ಪಕ್ಷದ ಸ್ಥಳೀಯ ಘಟಕ ರ್ಯಾಲಿ ಹಮ್ಮಿಕೊಂಡಿತ್ತು. ಈ ರ್ಯಾಲಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ದೇಶ ವಿರೋಧಿ ಘೋಷಣೆಗಳು ಮೊಳಗಿವೆ ಇದನ್ನು ಖಾಸಗಿ ವಾಹಿನಿಯೊಂದು ವಿಡಿಯೋ ಸಹಿತ ವರದಿ ಮಡಿದೆ.
ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕೆಲವರು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನUttar pradeshಉತ್ತರಪ್ರದೇಶCongress rallyShamefulನಾಚಿಕೆಗೇಡುZindabadಜಿಂದಾಬಾದ್ಕಾಂಗ್ರೆಸ್ ರ್ಯಾಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


