ದೇಶ

ಸೇನಾ ದಾಳಿಯಿಂದ ಭಯೋತ್ಪಾದನಾ ರಾಷ್ಟ್ರಕ್ಕೆ ಉತ್ತಮ ಸಂದೇಶ ರವಾನೆ: ಸೋನಿಯಾ ಗಾಂಧಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡುವ ಮೂಲಕ ಭಯೋತ್ಪಾದನಾ ರಾಷ್ಟ್ರ ಪಾಕಿಸ್ತಾನಕ್ಕೆ ಉತ್ತಮ ಸಂದೇಶವನ್ನು ರವಾನಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ಸೇನಾ ದಾಳಿಯಿಂದ ಭಯೋತ್ಪಾದನಾ ರಾಷ್ಟ್ರಕ್ಕೆ ಉತ್ತಮ ಸಂದೇಶ ರವಾನೆ: ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
Published On :

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡುವ ಮೂಲಕ ಭಯೋತ್ಪಾದನಾ ರಾಷ್ಟ್ರ ಪಾಕಿಸ್ತಾನಕ್ಕೆ ಉತ್ತಮ ಸಂದೇಶವನ್ನು ರವಾನಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗುರುವಾರ ಹೇಳಿದ್ದಾರೆ.

ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಉಗ್ರರ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ. ದಾಳಿಯಿಂದಾಗಿ ಭಯೋತ್ಪಾದನಾ ರಾಷ್ಟ್ರಕ್ಕೆ ಉತ್ತಮ ಸಂದೇಶವನ್ನು ರವಾನಿಸಿದಂತಾಗಿದೆ ಎಂದು ಹೇಳಿದ್ದಾರೆ.

ಉರಿ ಉಗ್ರ ದಾಳಿ ಸಾಕಷ್ಟು ನೋವುಂಟು ಮಾಡಿತ್ತು. ಪಾಕಿಸ್ತಾನ ಕೂಡಲೇ ಭಯೋತ್ಪಾದನೆಗೆ ನೀಡುತ್ತಿರುವ ಸೌಕರ್ಯಗಳನ್ನು ನಿಲ್ಲಿಸಬೇಕು. ರಾಷ್ಟ್ರವನ್ನು ಬಳಸಿಕೊಂಡು ಪಾಕಿಸ್ತಾನವು ಭಾರತದ ವಿರುದ್ಧ ನಡೆಸುತ್ತಿರುವ ಭಯೋತ್ಪಾದನಾ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದಿದ್ದಾರೆ.

ಇದೇ ವೇಳೆ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆ ಕುರಿತಂತೆ ಮಾತನಾಡಿರುವ ಅವರು ಸೇನೆಗೆ ಅಭಿನಂದನೆಗಳನ್ನು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿರುವ ಸರ್ಕಾರ ಹಾಗೂ ಪ್ರಧಾನಮಂತ್ರಿ ಮೋದಿಯವರಿಗೆ ಎಂದಿಗೂ ಪಕ್ಷ ಬೆಂಬಲ ಸೂಚಿಸಲಿದೆ ಎಂದು ತಿಳಿಸಿದ್ದಾರೆ.

ಸೋನಿಯಾ ಭೇಟಿ ಮಾಡಿದ ಸುಷ್ಮಾ ಸ್ವರಾಜ್

ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದಾರೆಂದು ಹೇಳಲಾಗುತ್ತಿದೆ.

ಸೇನೆ ನಡೆಸುತ್ತಿರುವ ದಾಳಿ ಕುರಿತು ಸುಷ್ಮಾ ಸ್ವರಾಜ್ ಅವರು ಸೋನಿಯಾ ಗಾಂಧಿಯವರಿಗೆ ವಿವರ ನೀಡಿದ್ದು, ದಾಳಿ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.