ಬಡವರ ಪರ ಹೋರಾಟ ನಡೆಸುತ್ತಿದ್ದಾಗ ನನ್ನ ವಿರುದ್ಧ ಕೇಸ್ ದಾಖಲಾಯ್ತು: ರಾಹುಲ್ ಗಾಂಧಿ
ನಾನು ಬಡವರ ಪರ ನಾನು ಹೋರಾಟ ನಡೆಸುತ್ತಿದ್ದಾಗ ನನ್ನ ವಿರುದ್ಧ ಕೇಸು ದಾಖಲಿಸಲಾಯಿತು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ....

ಗುವಾಹಟಿ: ನಾನು ಬಡವರ ಪರ ನಾನು ಹೋರಾಟ ನಡೆಸುತ್ತಿದ್ದಾಗ ನನ್ನ ವಿರುದ್ಧ ಕೇಸು ದಾಖಲಿಸಲಾಯಿತು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ನಾನು ದೇಶದಲ್ಲಿರುವ ರೈತರ ಪರ, ಹಾಗೂ ದೇಶದಲ್ಲಿರುವ ಬಡವರ ಪರ ಅವರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದೆ, ದೇಶದಲ್ಲಿರುವ ನಿರುದ್ಯೋಗಿ ಯುವಕರ ಪರ ಹೋರಾಟ ನಡೆಸುತ್ತಿದ್ದೆ. ಹೀಗಾಗಿ ನನ್ನ ವಿರುದ್ಧ ಆರ್ ಎಸ್ ಎಸ್ ನವರು ಕೇಸು ದಾಖಲಿಸಿದ್ದಾರೆ ಎಂದು ದೂರಿದ್ದಾರೆ.
ಗುವಾಹಟಿಯಲ್ಲಿ ಮಾತನಾಡಿದ ಅವರು, ಬರ್ಪೆಟಾ ಸತ್ರ ಘಟನೆ ಸಂಬಂಧ ರಾಹುಲ್ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ನೀಡಿರುವ ಆದೇಶದ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಮತ್ತಷ್ಟು ಕೇಸುಗಳನ್ನು ದಾಖಲಿಸಲಿ, ನಾನು ಮಾತ್ರ ಬಡವರ ಪರ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಬಗ್ಗೆ ಜನರಿಗೆ ಕೆಟ್ಟ ಸಂದೇಶ ನೀಡಿ ಕಳಂಕ ತರುತ್ತಿದ್ದಾರೆ ಎಂದು ಆರೋಪಿಸಿ ಆರ್ ಎಸ್ ಎಸ್ ಕಾರ್ಯಕರ್ತ ಅಂಜನ್ ಬೋರಾ ಎಂಬುವರು ದೂರು ದಾಖಲಿಸಿದ್ದರು.
ನಾನು ಆರ್ ಎಸ್ ಎಸ್ ತತ್ವ ಸಿದ್ಧಾಂತಗಳ ವಿರೋಧಿ. ದೇಶವನ್ನ ಒಡೆಯುವ ಯಾವುದೇ ಸಂಘಟನೆಗಳ ತತ್ವ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ. ದೇಶದ ಜನರ ಒಗ್ಗಟ್ಟನ್ನು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


