ಉಮಾ ಭಾರತಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರ ವಿರುದ್ಧ ಸ್ಥಳೀಯ...

Published On :
ಭೋಪಾಲ್: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರ ವಿರುದ್ಧ ಸ್ಥಳೀಯ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
13 ವರ್ಷಗಳ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಉಮಾ ಭಾರತಿ ವಿರುದ್ಧ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಭುಭಾಸ್ಕರ್ ಯಾದವ್ ಅವರು ಬಂಧನ ವಾರಂಟ್ ಜಾರಿ ಮಾಡಿದ್ದಾರೆ.
ಮಹತ್ವದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವೈಯಕ್ತಿಕ ವಿಚಾರಣೆಯಿಂದ ವಿನಾಯ್ತಿ ಕೋರಿ ಉಮಾ ಭಾರತಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಭಾರತಿಯನ್ನು ಬಂಧಿಸಿ ಕರೆತರುವಂತೆ ಪೊಲೀಸರಿಗೆ ಸೂಚಿಸಿದೆ.
ಕಳೆ ಅಕ್ಟೋಬರ್ 2015ರಿಂದಲೂ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ. 13 ವರ್ಷದ ಹಳೆಯ ಪ್ರಕರಣದಲ್ಲಿ ಅವರಿಗೆ ಸಾಕಷ್ಟು ಕಾಲವಕಾಶ ನೀಡಲಾಗಿದ್ದು, ಈಗ ಮತ್ತೆ ಕಾಲವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ಯಾದವ್ ಅವರು ಹೇಳಿದ್ದಾರೆ,
2003ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಉಮಾ ಭಾರತಿ ಅವರು, ದಿಗ್ವಿಜಯ್ ಸಿಂಗ್ ಅವರ ಅವಧಿಯಲ್ಲಿ ನೂರಾರು ಕೋಟಿ ರುಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


