ದೇಶ

ಬಿ.ಕೆ.ಬನ್ಸಾಲ್ ಆತ್ಮಹತ್ಯೆ ಪ್ರಕರಣ: ಸಿಬಿಐಗೆ ಎನ್ಎಚ್ಆರ್ ಸಿ ನೋಟಿಸ್

ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ತನಿಖೆ ಎದುರಿಸುತ್ತಿದ್ದ ಕಾರ್ಪೊರೇಟ್‌ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್‌ ಹಾಗೂ...

ಬಿ.ಕೆ.ಬನ್ಸಾಲ್ ಆತ್ಮಹತ್ಯೆ ಪ್ರಕರಣ: ಸಿಬಿಐಗೆ ಎನ್ಎಚ್ಆರ್ ಸಿ ನೋಟಿಸ್
ಬಿ.ಕೆ.ಬನ್ಸಾಲ್
Published On :
ನವದೆಹಲಿ: ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ತನಿಖೆ ಎದುರಿಸುತ್ತಿದ್ದ ಕಾರ್ಪೊರೇಟ್‌ ವ್ಯವಹಾರಗಳ ಮಾಜಿ ಮಹಾ ನಿರ್ದೇಶಕ ಬಿ.ಕೆ.ಬನ್ಸಾಲ್‌ ಹಾಗೂ ಅವರ ಪುತ್ರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ ಸಿ) ಗುರುವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಅಧಿಕಾರಿ ಹಾಗೂ ಆತನ ಕುಟುಂಬದ ಆತ್ಮಹತ್ಯೆಗೆ ಸಿಬಿಐ ಅಧಿಕಾರಿಗಳ ಮಾನಸಿಕ ಹಾಗೂ ದೈಹಿಕ ಕಿರುಕುಳ ಕಾರಣ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಎನ್ಎಚ್ಆರ್ ಸಿ, ಬನ್ಸಾಲ್ ಅವರ ಡೆತ್ ನೋಟ್ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ಮೂರು ದಿನದೊಳಗೆ ವಿವರ ನೀಡುವಂತೆ ಸಿಬಿಐಗೆ ನೋಟಿಸ್ ನೀಡಿದೆ.
ಸೆಪ್ಟೆಂಬರ್ 27ರಂದು ಬಿ.ಕೆ.ಬನ್ಸಾಲ್ ಹಾಗೂ ಅವರ ಪುತ್ರ ಯೋಗೇಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಸಿಬಿಐ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳವೇ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಲು ಕಾರಣ ಎಂದು ಬನ್ಸಾಲ್ ಅವರು ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ನಲ್ಲಿ  ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.
ಎರಡು ತಿಂಗಳ ಹಿಂದಷ್ಟೇ ಬನ್ಸಾಲ್ ಅವರ ಪತ್ನಿ ಸತ್ಯಬಾಲಾ ಮತ್ತು ಮಗಳು ನೇಹಾ ಪೂರ್ವ ದೆಹಲಿಯ ನೀಲಕಂಠ ಅಪಾರ್ಟ್ ಮೆಂಟ್ ವೊಂದರಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಜೈಲಿನಲ್ಲಿದ್ದಾಗ ಸಿಬಿಐನ ಇಬ್ಬರು ಮಹಿಳಾ ಅಧಿಕಾರಿಗಳು ನನ್ನ ಪತ್ನಿ ಹಾಗೂ ಮಗಳ ಕೆನ್ನೆಗೆ ಹೊಡೆದಿದ್ದರು. ನಿನ್ನ ಪತಿ ಹಾಗೂ ಮಗನನ್ನು ತುಂಡು ತುಂಡಾಗಿ ಕತ್ತರಿಸಿ ನಾಯಿಗಳಿಗೆ ತಿನ್ನಿಸುತ್ತೇವೆಂದು ಹೇಳಿದ್ದರು. ನನ್ನ ಪತ್ನಿಗೆ ಕಿರುಕುಳ ನೀಡಬೇಡಿ ಎಂದು ಹಿರಿಯ ಅಧಿಕಾರಿಗೆ ಮನವಿ ಮಾಡಿದೆ. ಈ ವೇಳೆ ಕಿರುಕುಳ ನೀಡದಿದ್ದರೆ, ನಾನು ಅಧಿಕಾರಿಯಾಗಲು ಸಾಧ್ಯವಿಲ್ಲ. ನಾನು ಆಡಳಿತಾರೂಢ ಪಕ್ಷದ ರಾಜಕೀಯ ಗಣ್ಯರೊಂದಿಗೆ ಸಂಪರ್ಕವನ್ನು ಹೊಂದಿದ್ದು, ಏನನ್ನು ಬೇಕಾದರೂ ಮಾಡಬಲ್ಲೆ ಎಂದು ಬೆದರಿಕೆ ಹಾಕಿದರು ಎಂದು ಬನ್ಸಾಲ್ ಡೆತ್ ನೋಟ್ ನಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ಮೂವರು ಅಧಿಕಾರಿಗಳ ಹೆಸರನ್ನೂ ಸೂಚಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.