ಪಾಕ್ ವಿರುದ್ಧದ ಸೀಮಿತ ದಾಳಿಗೆ ಇಸ್ರೋ ಉಪಗ್ರಹದ ಚಿತ್ರಗಳ ನೆರವು !
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರ ಹತ್ಯೆ ಮಾಡಿದ ಭಾರತೀಯ ಸೇನೆಯ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇಸ್ರೋ ಉಪಗ್ರಹಗಳು ಸೇನಾ...

ಚೆನ್ನೈ: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಯೋತ್ಪಾದಕರ ಹತ್ಯೆ ಮಾಡಿದ ಭಾರತೀಯ ಸೇನೆಯ ಕಾರ್ಯಾಚರಣೆ ಬಗ್ಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇಸ್ರೋ ಉಪಗ್ರಹಗಳು ಸೇನಾ ಕಾರ್ಯಾಚರಣೆಗೆ ನೆರವಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.
ಇಸ್ರೋ ಉಡಾವಣೆ ಮಾಡಿದ್ದ ಕಾರ್ಟೋಸ್ಯಾಟ್ ಸರಣಿಯ ಉಪಗ್ರಹಗಳು ನೀಡಿದ್ದ ಚಿತ್ರಗಳು ಸೇನಾ ಕಾರ್ಯಾಚರಣೆಗೆ ನೆರವಾಗಿದ್ದವು, ಸೀಮಿತ ದಾಳಿಗೆ ಕಾರ್ಯತಂತ್ರ ರೂಪಿಸುವ ಮೊದಲು ದಾಳಿ ನಡೆಸಲು ಉದ್ದೇಶಿಸಲಾಗಿದ್ದ ಸ್ಥಳದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಸ್ರೋ ಸಂಸ್ಥೆಯ ಕಾರ್ಟೋಸ್ಯಾಟ್ ಸರಣಿಯ ಉಪಗ್ರಹಗಳು ಕಳಿಸಿದ್ದ ಚಿತ್ರಗಳನ್ನೇ ಬಳಕೆ ಮಾಡಲಾಗಿತ್ತಂತೆ.
ಇಸ್ರೋದ ಕಾರ್ಟೋಸ್ಯಾಟ್ ಸರಣಿಯ ಉಪಗ್ರಹದ ಚಿತ್ರಗಳು ಸ್ಪಷ್ಟ ನಿಖರತೆ ಹೊಂದಿದ್ದು, ಉಪಗ್ರಹಗಳನ್ನು 2016 ರ ಜೂನ್ ನಲ್ಲಿ ಉಡಾವಣೆ ಮಾಡಲಾಗಿತ್ತು. ಆದರೆ ಇಸ್ರೋ ಈ ಉಪಗ್ರಹಗಳನ್ನು ಕಾರ್ಯಕತ್ರದ ಭಾಗವಾಗಿ ಬಳಕೆಯಾಗುವುದರ ಬಗ್ಗೆ ಯಾವುದೇ ಮಾಹಿತಿ ನೀಡದೆ ಗೌಪ್ಯವಾಗಿಟ್ಟಿತ್ತು. ಇಸ್ರೋ ಉಪಗ್ರಹಕ್ಕೆ ಬಳಕೆ ಮಾಡಲಾಗಿದ್ದ ಉಪಕರಣಗಳನ್ನು ಕಾರ್ಯತಂತ್ರಗಳಿಗೆ ನೆರವಾಗುವಂತೆ ರಕ್ಷಣಾ ಪಡೆಗಳ ಅಧಿಕಾರಿಗಳು ನಿರ್ಧರಿಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.
ಬಾಹ್ಯಾಕಾಶದಿಂದ ಭೂಮಿಯ ಮೇಲೆ ನಿಗಾವಹಿಸುವುದಕ್ಕಾಗಿ ಇಸ್ರೋ ಕಾರ್ಟೋಸ್ಯಾಟ್ ಸರಣಿಯ ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಗಡಿಭಾಗ ಹಾಗೂ ಕರಾವಳಿ ಪ್ರದೇಶ, ಹವಾಮಾನ, ಕೃಷಿ, ಭೂ ನಕ್ಷೆ ಸೇರಿದಂತೆ ಹಲವು ಮಾಹಿತಿಗಳನ್ನು ಕಾರ್ಟೋಸ್ಯಾಟ್ ಉಪಗ್ರಹದಿಂದ ಪಡೆಯಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


