ಕಾವೇರಿ ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ...

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಇಂದು ಮಧ್ಯಾಹ್ನ 12.30 ರ ವೇಳೆಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಉಭಯ ರಾಜ್ಯಗಳ ನಡುವಿನ ಜಲ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಧ್ಯಸ್ಥಿಕೆ ವಹಿಸಲು ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಬಳಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಅರ್ಜಿ ವಿಚಾರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಸೂಚನೆ ನೀಡಿ ಎಂದು ರಾಷ್ಟ್ರಪತಿ ಬಳಿ ಮನವಿ ಮಾಡಿದ್ದಾರೆ.
ಇನ್ನೂ ಸುಪ್ರಿಂ ಕೋರ್ಟ್ ನಲ್ಲಿ ಇಂದು ಕಾವೇರಿ ವಿವಾದ ಸಂಬಂಧ ವಿಚಾರಣೆ ಇರುವುದರಿಂದ ಬೆಂಗಳೂರಿನಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದೆ. ಮಂಡ್ಯ, ಮೈಸೂರು ಹಾಗೂ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


