ದೇಶ

ಇರಾನಿ ನಕಲಿ ಪದವಿ ಪ್ರಮಾಣಪತ್ರ ವಿವಾದ: ಅ.6ಕ್ಕೆ ದೆಹಲಿ ಹೈಕೋರ್ಟ್ ಆದೇಶ

ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಯವರ ನಕಲಿ ಪದವಿ ಪ್ರಮಾಣ ಪತ್ರ ವಿವಾದ ಕುರಿತಂತೆ ದೆಹಲಿ ಹೈಕೊರ್ಟ್ ಅ.6 ರಂದು ಆದೇಶ ಹೊರಡಿಸಲಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಇರಾನಿ ನಕಲಿ ಪದವಿ ಪ್ರಮಾಣಪತ್ರ ವಿವಾದ: ಅ.6ಕ್ಕೆ ದೆಹಲಿ ಹೈಕೋರ್ಟ್ ಆದೇಶ
ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ
Published On :

ನವದೆಹಲಿ: ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಯವರ ನಕಲಿ ಪದವಿ ಪ್ರಮಾಣ ಪತ್ರ ವಿವಾದ ಕುರಿತಂತೆ ದೆಹಲಿ ಹೈಕೊರ್ಟ್ ಅ.6 ರಂದು ಆದೇಶ ಹೊರಡಿಸಲಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ನಕಲಿ ಪ್ರಮಾಣ ಪತ್ರ ಕುರಿತಂತೆ ಸ್ಮೃತಿ ಇರಾನಿಯವರಿಗೆ ಸಮನ್ಸ್ ಜಾರಿ ಮಾಡಬೇಕೋ ಅಥವಾ ಬೇಡವೋ ಎಂಬುದರ ಕುರಿತಂತೆ ದೆಹಲಿ ಹೈಕೋರ್ಟ್ ಅ.6 ರಂದು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ನಕಲಿ ಪದವಿ ಪ್ರಮಾಣಪತ್ರ ಕುರಿತಂತೆ ಸೆಪ್ಟೆಂಬರ್ 3 ರಂದು ಅಹ್ಮದ್ ಖಾನ್ ಎಂಬುವವರು ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು,

ಇದರಂತೆ ಅಹ್ಮದ್ ಖಾನ್ ಅವರ ಪರ ವಕೀಲ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. 2004 ಲೋಕಸಭಾ ಚುನಾವಣೆ ವೇಳೆ ಸ್ಮೃತಿ ಇರಾನಿಯವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವಿ ಪಡೆದಿರುವುದಾಗಿ ಶೈಕ್ಷಣಿಕ ಪದವಿ ಪ್ರಮಾಣವನ್ನು ಸಲ್ಲಿಸಿದ್ದರು.

ತದನಂತರ 2011ರಲ್ಲಿ ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಅಫಿಡವಿಟ್ ಸಲ್ಲಿಸುವಾಗ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದರು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.