ಪಡಿತರ ಚೀಟಿ ಮೇಲಿನ ಅಖಿಲೇಶ್ ಫೋಟೋ ಜನರನ್ನು ಹಾದಿ ತಪ್ಪಿಸುತ್ತಿತ್ತು; ಬಿಜೆಪಿ
ಪಡಿತರ ಚೀಟಿ ಮೇಲಿನ ಅಖಿಲೇಶ್ ಯಾದವ್ ಅವರ ಭಾವಚಿತ್ರ ಕೆಟ್ಟ ರಾಜಕೀಯವಾಗಿದ್ದು, ಜನರನ್ನು ತಪ್ಪು ಹಾದಿಗೆಳೆಯುತ್ತಿತ್ತು ಎಂದು ಬಿಜೆಪಿ ಭಾನುವಾರ ಹೇಳಿದೆ...

Published On :
ನವದೆಹಲಿ: ಪಡಿತರ ಚೀಟಿ ಮೇಲಿನ ಅಖಿಲೇಶ್ ಯಾದವ್ ಅವರ ಭಾವಚಿತ್ರ ಕೆಟ್ಟ ರಾಜಕೀಯವಾಗಿದ್ದು, ಜನರನ್ನು ತಪ್ಪು ಹಾದಿಗೆಳೆಯುತ್ತಿತ್ತು ಎಂದು ಬಿಜೆಪಿ ಭಾನುವಾರ ಹೇಳಿದೆ.
ಉತ್ತರಪ್ರದೇಶದಲ್ಲಿ ಪಡಿತರ ಚೀಟಿಗಳಿಗೆ ಹೊಸ ರೂಪ ತರುವ ಯೋಗಿ ಆದಿತ್ಯನಾಥ್ ಅವರ ನಿರ್ಧಾರದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಸಾಮಾಜಿಕ ಕಾರ್ಯಕ್ರಮಗಳ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು. ಆದರೆ, ಅಖಿಲೇಶ್ ಯಾದವ್ ಅವರು ಜನರಿಗೆ ನೀಡುವ ಪಡಿತರ ಚೀಟಿಗಳ ಮೇಲೆ ತಮ್ಮ ಭಾವಚಿತ್ರಗಳನ್ನು ಹಾಕಿಸಿಕೊಳ್ಳುವ ಮೂಲಕ ಕೆಟ್ಟ ರಾಜಕೀಯವನ್ನು ಮಾಡಿದ್ದರು, ತಮ್ಮ ಅಧಿಕಾರದ ಅವಧಿಯಲ್ಲಿ ಜನರನ್ನು ತಪ್ಪು ಹಾದಿಗೆ ಎಳೆಯುವ ಪ್ರಯತ್ನಗಳನ್ನು ಮಾಡಿದ್ದರು ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಅಧಿಕಾರ ಬದಲಾದ ಬಳಿಕ ಯೋಗಿ ಆದಿತ್ಯನಾಥ್ ಅವರು ಪಡಿತರ ಚೀಟಿಗಳ ಮೇಲಿರುವ ಅಖಿಲೇಶ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪಡಿತರ ಚೀಟಿಗಳ ಮೇಲೆ ತಮ್ಮ ಭಾವಚಿತ್ರಗಳನ್ನು ಹಾಕಿಸಿಕೊಳ್ಳುವುದು ನಿಜಕ್ಕೂ ಒಪ್ಪಲು ಸಾಧ್ಯವಾದದ್ದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿUttar pradeshಉತ್ತರಪ್ರದೇಶAkhilesh Yadavಅಖಿಲೇಶ್ ಯಾದವ್photoration cardಪಡಿತರ ಚೀಟಿCheap politicsಭಾವಿಚಿತ್ರಕೆಟ್ಟ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


