ದೇಶ

ದೆಹಲಿ: ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲು

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತೊಂದರೆ ನೀಡಲು...

ದೆಹಲಿ: ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲು
ಕೇಂದ್ರ ಸಚಿವೆ ಸ್ಮೃತಿ ಇರಾನಿ
Published On :
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತೊಂದರೆ ನೀಡಲು ಪ್ರಯತ್ನಿಸಿದ ನಾಲ್ವರು ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 354ಡಿ, ಸೆಕ್ಷನ್ 509ರಡಿ ಕೇಸು ದಾಖಲಿಸಲಾಗಿದೆ.
ದಕ್ಷಿಣ ದೆಹಲಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಸ್ಮೃತಿ ಇರಾನಿಯವರ ಕಾರು ರಸ್ತೆಯಲ್ಲಿ ಹೋಗುತ್ತಿದ್ದುದು ನೋಡಿ ಅವರನ್ನು ಹಿಂಬಾಲಿಸಿಕೊಂಡು ಹೋದರು. 
ವಿದ್ಯಾರ್ಥಿಗಳು ಕುಡಿದ ಅಮಲಿನಲ್ಲಿ ಮೈಮರೆತಿದ್ದರು ಎಂದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಸಚಿವೆ ಮೋತಿ ಬಾಗ್ ಮೇಲ್ಸೇತುವೆ ದಾಟಿ ಹೋಗುತ್ತಿದ್ದಾಗ ಅವರ ಕಾರನ್ನು ಓವರ್ ಟೇಕ್ ಮಾಡಲು ವಿದ್ಯಾರ್ಥಿಗಳು ಪ್ರಯತ್ನಿಸಿದರು.
ಮೊದಲು ಪಿಸಿಆರ್ ಕರೆ ಮಾಡಿದ ಸಚಿವೆ ನಂತರ ಅಧಿಕೃತವಾಗಿ ದೂರು ನೀಡಿದರು. ನಂತರ ವಿದ್ಯಾರ್ಥಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.