ಕೇಜ್ರಿವಾಲ್ 'ಮೋದಿ-ಫೋಬಿಯಾ'ದಿಂದ ಬಳಲುತ್ತಿದ್ದಾರೆ: ಬಿಜೆಪಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಕೇಜ್ರಿವಾಲ್ ಅವರು 'ಮೋದಿ ಫೋಬಿಯಾ'ದಿಂದ ಬಳಲುತ್ತಿದ್ದಾರೆಂದು...

Published On :
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಕೇಜ್ರಿವಾಲ್ ಅವರು 'ಮೋದಿ ಫೋಬಿಯಾ'ದಿಂದ ಬಳಲುತ್ತಿದ್ದಾರೆಂದು ಭಾನುವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರು, ಕೇಜ್ರಿವಾಲ್ ಅವರು ಇವಿಎಂ ಯಂತ್ರದ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. 2014ರ ದೆಹಲಿ ಚುನಾವಣೆಯಲ್ಲಿ 67 ಸೀಟುಗಳನ್ನು ಗೆದ್ದಾಗ ನಾವು ಇವಿಎಂನಲ್ಲಿ ದೋಷವಿತ್ತು ಎಂದು ದೂರಿರಲಿಲ್ಲ. ಕೇಜ್ರಿವಾಲ್ ಅವರು ಇದೀಗ 'ಮೋದಿ ಫೋಬಿಯಾ'ದಿಂದ ಬಳಲುತ್ತಿದ್ದು, ಹೀಗಾಗಿಯೇ ಮೋದಿ ವಿರುದ್ದ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಹವಾಲಾ ದಂಧೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಗ ಅವರ ವಿರುದ್ಧ ಕೇಜ್ರಿವಾಲ್ ಅವರು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ದೆಹಲಿ ಜನತೆ ವಿದ್ಯುತ್ ಕೊರತೆಯಿಂದ ಬಳಲುತ್ತಿದ್ದಾರೆ. ಆದರೆ, ಆಪ್ ಸರ್ಕಾರ ಮಾತ್ರ ರೂ.97 ಕೋಟಿ ಹಣವನ್ನು ಕೇವಲ ಪ್ರಚಾರಗಳಿಗೆ ಬಳಕೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


