ದೇಶ

ಉಗ್ರತ್ವದಿಂದ ಲಾಭವಿಲ್ಲ; ಅದು ಕೇವಲ ಕಾಶ್ಮೀರವನ್ನು ರಕ್ತಸಿಕ್ತಗೊಳಿಸುತ್ತದೆ: ಪ್ರಧಾನಿ ಮೋದಿ

ಭಯೋತ್ಪಾದನೆಯಿಂದ ಯಾವುದೇ ಪ್ರಯೋಜನವಿಲ್ಲ, ಅದು ಕೇವಲ ಕಾಶ್ಮೀರವನ್ನು ರಕ್ತಸಿಕ್ತಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ಉಗ್ರತ್ವದಿಂದ ಲಾಭವಿಲ್ಲ; ಅದು ಕೇವಲ ಕಾಶ್ಮೀರವನ್ನು ರಕ್ತಸಿಕ್ತಗೊಳಿಸುತ್ತದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ: ಭಯೋತ್ಪಾದನೆಯಿಂದ ಯಾವುದೇ ಪ್ರಯೋಜನವಿಲ್ಲ, ಅದು ಕೇವಲ ಕಾಶ್ಮೀರವನ್ನು ರಕ್ತಸಿಕ್ತಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. 
ಭಾರತದ ಚೊಚ್ಚಲ ವಿಶ್ವದರ್ಜೆಯ ಸುರಂಗ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ದ್ವಿಮುಖ ಪಥದ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಸುರಂಗ ಮಾರ್ಗದಿಂದ ಜಮ್ಮು-ಕಾಶ್ಮೀರದ ಜನತೆಗೆ ಪ್ರಯೋಜನವಾಗಲಿದೆ ಎಂದರು. 
ಈ ಯೋಜನೆ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಹಕರಿಸಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದರು. ಸಂಪರ್ಕ ಸಾಧಿಸಲು ಮಾತ್ರ ನಾವು ರಸ್ತೆಗಳನ್ನು ನಿರ್ಮಿಸಿಲ್ಲ, ಆದರೆ ಹೃದಯಗಳನ್ನು ಸಂಪರ್ಕಿಸುವ ಕೆಲಸ ಮಾಡಿದ್ದೇವೆ ಎಂದರು. 
ಕೆಲ ದಾರಿತಪ್ಪಿದ ಯುವಕರು ಕಲ್ಲುಗಳನ್ನು ಎಸೆಯುತ್ತಿದ್ದಾರೆ. ಆದರೆ ಕಾಶ್ಮೀರದ ಯುವಕರು ಮಾತ್ರ ಮೂಲಸೌಕರ್ಯ ನಿರ್ಮಿಸಲು ಕಲ್ಲುಗಳನ್ನು ಬಳಸುತ್ತಿದ್ದಾರೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.