ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ ಪ್ರತ್ಯೇಕತಾವಾದಿಗಳು
ಪ್ರತ್ಯೇಕತಾವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

Published On :
ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಏಷ್ಯಾದ ಮೊದಲ ದ್ವಿಮುಖ ಪಥದ ಸುರಂಗ ಮಾರ್ಗವನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಆಗಮಿಸಲಿದ್ದಾರೆ. ಇತ್ತ ಪ್ರತ್ಯೇಕತಾವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಚೆನಾನಿ-ನಶ್ರಿಸುರಂಗ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಆಗಮಿಸುತ್ತಿರುವ ವೇಳೆಯಲ್ಲೇ ಕಾಶ್ಮೀರ ಪ್ರತ್ಯೇಕತಾವಾದಿಗಳು ಪ್ರಧಾನಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಕೇವಲ ಕೆಲವೇ ಕೆಲವು ಅಂಗಡಿಗಳು, ಪೆಟ್ರೋಲ್ ಬಂಕ್ ಗಳು ತೆರೆದಿದೆ. ಉಳಿದಂತೆ ವಾಹನ ಸಂಚಾರ, ಖಾಸಗಿ ವಾಹನಗಳು ಆಟೋಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿKashmirಕಾಶ್ಮೀರಪ್ರತ್ಯೇಕತಾವಾದಿಗಳುಚೆನಾನಿ-ನಶ್ರಿ ಸುರಂಗ ಮಾರ್ಗChenani-Nashri tunnelSeparatist groups
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


