ಕಾಶ್ಮೀರದಲ್ಲಿ ಸಿಆರ್‍ಪಿಎಫ್ ಕಾವಲುಪಡೆ ಮೇಲೆ ಉಗ್ರರ ದಾಳಿ: 6 ಯೋಧರಿಗೆ ಗಾಯ
ಶ್ರೀನಗರ ಸಮೀಪದ ಪಂಥಾ ಚೌಕ್ ಬಳಿ ಸಿಆರ್‍ಪಿಎಫ್ ಕಾವಲುಪಡೆ ಮೇಲೆ ಸೋಮವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು,...

Published On :
ಶ್ರೀನಗರ: ಶ್ರೀನಗರ ಸಮೀಪದ ಪಂಥಾ ಚೌಕ್ ಬಳಿ ಸಿಆರ್‍ಪಿಎಫ್ ಕಾವಲುಪಡೆ ಮೇಲೆ ಸೋಮವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಆರು ಯೋಧರು ಹಾಗೂ ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಆರು ಮಂದಿ ಸಿಆರ್‍ಪಿಎಫ್ ಯೋಧರು ಹಾಗೂ ಓರ್ವ ನಾಗರಿಕ ಗಾಯಗೊಂಡಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನಮ್ಮ ಸೈನಿಕರು ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು , ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್‍ಪಿಎಫ್ ಪಿಆರ್‍ಒ ಬಿ ಚೌಧರಿ ಅವರು ತಿಳಿಸಿದ್ದಾರೆ.
ಕಳೆದೆರಡು ದಿನಗಳಲ್ಲಿ ರಕ್ಷಣಾ ಪಡೆ ಮೇಲೆ ನಡೆದ ಎರಡನೇ ದಾಳಿ ಇದಾಗಿದ್ದು, ನಿನ್ನೆ ಪ್ರಧಾನಿ ನರಂದ್ರ ಮೋದಿ ಅವರು ಚೆನಾನಿ - ನಶ್ರಿ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲು ಬಂದಿದ್ದಾಗ ಜಮ್ಮು ಕಾಶ್ಮೀರದಲ್ಲಿ ಅರೆಸೈನಿಕ ದಳದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಸಾವಿಗೀಡಾಗಿದ್ದು 11 ಮಂದಿಗೆ ಗಾಯಗಳಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


