ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿದ್ದಾರೆಂದು...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಸಣ್ಣ ಸಣ್ಣ ಶಸ್ತ್ರಾಸ್ತ್ರಗಳು, ಆಟೋಮೆಟಿಕ್ ವೆಪನ್ಸ್ ಮತ್ತು ಶೆಲ್ ಗಳ ಮುಖಾಂತರ ಭಾರತೀಯ ಸೇನೆ ಮೇಲೆ ಪಾಕಿಸ್ತಾನ ಪಡೆ ಗಡಿ ನಿಯಂತ್ರಣ ರೇಖೆ ಬಳಿ ದಾಳಿ ಮಾಡುತ್ತಿದ್ದಾರೆಂದು ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಷ್ ಮೆಹ್ತಾ ಅವರು ಹೇಳಿದ್ದಾರೆ.
11 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಪಡೆದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಗಡಿಯಲ್ಲಿ ಈಗಲು ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


