ಕೋಮು ಮೀಸಲಾತಿ ದೇಶವನ್ನು ವಿಭಜಿಸುತ್ತದೆ: ವೆಂಕಯ್ಯ ನಾಯ್ಡು
ಕೋಮು ಮೀಸಲಾತಿ' ದೇಶವನ್ನು ವಿಭಜಿಸಲಿದ್ದು, ಈ ಹಿನ್ನಲೆಯಲ್ಲಿ ತೆಲಂಗಾಣ ರಾಜ್ಯದ ಕೆಲ ಆಗ್ರಹಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಸೋಮವಾರ ಹೇಳಿದ್ದಾರೆ...

Published On :
ಹೈದರಾಬಾದ್: 'ಕೋಮು ಮೀಸಲಾತಿ' ದೇಶವನ್ನು ವಿಭಜಿಸಲಿದ್ದು, ಈ ಹಿನ್ನಲೆಯಲ್ಲಿ ತೆಲಂಗಾಣ ರಾಜ್ಯದ ಕೆಲ ಆಗ್ರಹಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಸೋಮವಾರ ಹೇಳಿದ್ದಾರೆ.
ತೆಲಂಗಾಣ ರಾಜ್ಯದಲ್ಲಿರುವ ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಈ ಹಿಂದೆ ಆಗ್ರಹಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೆಂಕಯ್ಯ ನಾಯ್ಡು ಅವರು, ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುವ ಹಕ್ಕು ನಮಗಿದೆ. ಕೋಮು ಮೀಸಲಾತಿಗೆ ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ತೆಲಂಗಾಣ ರಾಜ್ಯವೆಂದ ಮಾತ್ರಕ್ಕೆ ನಾವು ವಿರೋಧಿಸುತ್ತಿಲ್ಲ. ಆಂಧ್ರಪ್ರದೇಶ ಮುಖ್ಯಮಂತ್ರಿ ರಾಜಶೇಖರ ರೆಡ್ಡಿಯವರು ಈ ವಿಚಾರ ಪ್ರಸ್ತಾಪ ಮಾಡಿದಾಗಲೂ ನಾವು ವಿರೋಧ ವ್ಯಕ್ತಪಡಿಸಿದ್ದೆವು. ಚಂದ್ರಬಾಬು ನಾಯ್ಡು ಪ್ರಸ್ತಾಪ ಮಾಡಿದಾಗಲೂ ನಾವು ವಿರೋಧಿಸಿದ್ದೆವು. ಇದೀಗ ತೆಲಂಗಾಣ ರಾಜ್ಯ ಆಗ್ರಹಿಸುತ್ತಿದ್ದು, ಇದಕ್ಕೂ ನಾವು ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಏಕೆಂದರೆ, ಕೋಮು ಮೀಸಲಾದಿ ದೇಶವನ್ನು ವಿಭಜಿಸುತ್ತದೆ ಎಂಬ ಕಾರಣಕ್ಕೆ ಎಂದು ಹೇಳಿದ್ದಾರೆ.
ಸಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ತೆಲಂಗಾಣ ಸರ್ಕಾರ ಮೀಸಲಾತಿ ನೀಡಿದ್ದೇ ಆಗಿದ್ದರೆ ನಾವು ಅದಕ್ಕೆ ಬೆಂಬಲ ನೀಡುತ್ತಿದ್ದೆವು. ಮುಸ್ಲಿಮರಲ್ಲೂ ಬಡವರಿದ್ದಾರೆ. ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದರೆ, ಮೀಸಲಾತಿ ಕೊಡೋಣ. ಆದರೆ, ಧಾರ್ಮಿಕವಾಗಿ ಮೀಸಲಾತಿಯನ್ನು ನೀಡಲು ಸಾಧ್ಯವಿಲ್ಲ. ಧಾರ್ಮಿಕ ಮೀಸಲಾತಿಗೆ ಬಿಜೆಪಿ ವಿರುದ್ಧವಾಗಿದೆ.
ಧರ್ಮದ ಆಧಾರದ ಮೇಲೆ ನಾವು ಮೀಸಲಾತಿ ನೀಡುವುದಿಲ್ಲ ಎಂದು ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲರೇ ಹೇಳಿದ್ದಾರೆ. ಹೀಗಾಗಿಯೇ ನಮ್ಮ ಸಂಸ್ಥಾಪಕ ಜನಕರೂ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ತೆಲಂಗಾಣ ಸರ್ಕಾರ ಮುಕ್ತವಾಗಿದ್ದು, ಅವರು ಕಾನೂನನ್ನು ತರಬಹುದಾಗಿದೆ. ಆದರೆ, ಕಾನೂನು ವ್ಯವಸ್ಥೆಯಲ್ಲಿ ಈ ಕಾನೂನು ಗಟ್ಟಿಯಾಗಿ ನಿಲ್ಲಲು ಸಾಧ್ಯವೇ ಇಲ್ಲ ಎಂಬುದನ್ನು ಈ ಮೂಲಕ ನಾನು ವಿಶ್ವಾಸ ವ್ಯಕ್ತಪಡಿಸುತ್ತೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿindiaಭಾರತತೆಲಂಗಾಣMuslimTelanganaಮುಸ್ಲಿಂವೆಂಕಯ್ಯ ನಾಯ್ಡುVenkaiah NaiduCommunal reservationಕೋಮು ಮೀಸಲಾತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


