ದೇಶ

ದೇಶದಾದ್ಯಂತ ರಾಮನವಮಿ ಆಚರಣೆ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ

ಏಕಪತ್ನಿ ವ್ರತಸ್ಥ, ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಜನ್ಮದಿನದ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಶುಭಾಶಯಗಳನ್ನು ಕೋರಿದ್ದಾರೆ...

ದೇಶದಾದ್ಯಂತ ರಾಮನವಮಿ ಆಚರಣೆ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ
ದೇಶದಾದ್ಯಂತ ರಾಮನವಮಿ ಆಚರಣೆ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ
Published On :
ನವದೆಹಲಿ: ಏಕಪತ್ನಿ ವ್ರತಸ್ಥ, ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಜನ್ಮದಿನದ ಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಶುಭಾಶಯಗಳನ್ನು ಕೋರಿದ್ದಾರೆ. 
ರಾಮನವಮಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಶುಭಾಶಯ ಕೋರಿರುವ ಅವರು, ರಾಮನವಮಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ದೇಶ ಹಾಗೂ ವಿದೇಶದಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯಗಳು ಎಂದು ಹೇಳಿದ್ದಾರೆ. 
ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರೂ ಕೂಡ ಟ್ವಿಟರ್ ನಲ್ಲಿ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಶ್ರೀರಾಮನ ಅತ್ಯುತ್ಕೃಷ್ಟವಾದ ಜೀವನ, ಉದಾತ್ತ ಆದರ್ಶ ಮತ್ತು ನೈತಿಕ ಮೌಲ್ಯಗಳು ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ನಂಬಿದ್ದೇನೆ. ಜನತೆಗೆ ಈ ಮೂಲಕ ರಾಮನವಮಿ ಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ತಿಳಿಸಿದ್ದಾರೆ. 
ಇದರಂತೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರೂ ಕೂಡ ಶುಭಾಶಯಗಳನ್ನು ಕೋರಿದ್ದು, ಶ್ರೀ ರಾಮ ಎಲ್ಲರಿಗೂ ಉತ್ತಮವಾದ ಆರೋಗ್ಯ ಹಾಗೂ ಸಂತೋಷವನ್ನು ನೀಡಲಿ ಎಂದು ಕೇಳಿಕೊಳ್ಳುತ್ತಿದ್ದೇನೆ. ರಾಮನವಮಿ ಹಬ್ಬದ ಶುಭಾಶಯಗಳು...ಜೈ ಶ್ರೀ ರಾಮ್! ಎಂದು ಹೇಳಿದ್ದಾರೆ. 
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ದೇಶದ ಜನತೆಗೆ ರಾಮನವಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.