ದೇಶ

ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಿ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್!

ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ರೈತರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.

ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಿ: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್!
ಸಂಗ್ರಹ ಚಿತ್ರ
Published On :

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ರೈತರ ತೀರ್ಪು ನೀಡಿರುವ ಮದ್ರಾಸ್ ಹೈಕೋರ್ಟ್ ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಮಂಗಳವಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ  ನೀಡಿದೆ.

ಬರ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದಲೂ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಸಹಕಾರಿ ಬ್ಯಾಂಕ್ ಗಳಲ್ಲಿರುವ  ರೈತರ ಸಾಲವನ್ನು ಮನ್ನಾ ಮಾಡುವಂತೆ ಆದೇಶ ನೀಡಿದೆ. ಈ ಹಿಂದಷ್ಟೇ ತಮಿಳುನಾಡು ಸರ್ಕಾರ 5 ಎಕರೆವರೆಗಿನ ರೈತರ ಕೃಷಿ ಸಾಲವನ್ನು ಮನ್ನಾ ಮಾಡಿತ್ತು.

ಹೈಕೋರ್ಟ್ ತೀರ್ಪಿನ ಹೊರತಾಗಿಯೂ ಅತ್ತ ದೆಹಲಿಯ ಜಂತರ್ ಮಂತರ್ ನಲ್ಲಿ ತಮಿಳುನಾಡು ರೈತರು ತಮ್ಮ ಅರೆ ಬೆತ್ತಲೆ ಪ್ರತಿಭಟನೆಯನ್ನು ಮುಂದುವರೆಸಿದ್ದು, ಕೇಂದ್ರ ಸರ್ಕಾರ ಕೂಡಲೇ 40 ಸಾವಿರ ಕೋಟಿ ಬರ ಪರಿಹಾರ  ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಅಂತೆಯೇ ಕೂಡಲೇ ಕೇಂದ್ರ ಸರ್ಕಾರ ಸ್ಥಗಿತವಾಗಿರುವ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.