ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ: 10 ಲಕ್ಷಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಳ್ಳುವ ಭೀತಿ
ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದು...

Published On :
ನವದೆಹಲಿ: ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದು ಅನೇಕರ ಜನಜೀವನಕ್ಕೆ ಮತ್ತು ಆದಾಯ ಮೂಲಕ್ಕೆ ಹೊಡೆತ ಬಿದ್ದಿದೆ. ಈ ವಿಷಯದಲ್ಲಿ ಮಧ್ಯದ ದಾರಿ ಹುಡುಕುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಸುಪ್ರೀಂ ಕೋರ್ಟ್ ಆದೇಶದಿಂದ ಪ್ರವಾಸೋದ್ಯಮ ವಲಯದ ಮೇಲೆ ಹೊಡೆತ ಬೀಳಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮ ಹೇಳಿದ್ದು ಸರ್ಕಾರ ಇದಕ್ಕೆ ಪರಿಹಾರ ಕಂಡುಹಿಡಿಯಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ. ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಬ್ ಕಾಂತ್, ಲಕ್ಷಾಂತರ ಜನರು ಇದರಿಂದ ಉದ್ಯೋಗ ಕಳೆದುಕೊಳ್ಳಬಹುದು. ಒಂದು ದಶಲಕ್ಷ ಮಂದಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕೆಲವು ರಾಜ್ಯಗಳ ಬಜೆಟ್ ನ ಶೇಕಡಾ 10ರಷ್ಟು ಮದ್ಯದಿಂದ ಆದಾಯ ಬರುತ್ತಿದ್ದು, ಇದು ಖಂಡಿತಾ ಆರ್ಥಿಕತೆ ಮೇಲೆ ರಾಜ್ಯಗಳ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಇದನ್ನು ವೈಭವೀಕರಿಸುತ್ತವೆ.
ರಾಜ್ಯಗಳ ಪೈಕಿ ಪಂಜಾಬ್ ನಲ್ಲಿ ಈ ಬಗ್ಗೆ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.ರಾಜ್ಯದ ಹೊಟೇಲ್ ಮತ್ತು ರೆಸ್ಟೋರೆಂಟ್ ಒಕ್ಕೂಟ, ಪಂಜಾಬ್ ರಾಜ್ಯದಿಂದ ಪ್ರವಾಸೋದ್ಯಮ ಕಣ್ಮರೆಯಾಗಲಿದ್ದು, ಅಸಂಖ್ಯಾತ ಜನರು ಕೆಲಸ ಕಳೆದುಕೊಳ್ಳುತ್ತಾರೆ. ಪಂಜಾಬ್ ನಲ್ಲಿ 2,800 ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ ಗಳಿವೆ. ಅವುಗಳಲ್ಲಿ ಎಲ್ಲವೂ ಬಾರ್ ಮತ್ತು ಪಬ್ ಗಳಾಗಿವೆ. ಈ ಆದೇಶದಿಂದ ಶೇಕಡಾ 80ರಷ್ಟು ನಾಶವಾಗಿ ಹೋಗುತ್ತವೆ ಎಂದು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಸತೀಶ್ ಅರೋರ ತಿಳಿಸುತ್ತಾರೆ.
ನಿಷೇಧವನ್ನು ಮರು ಪರಿಶೀಲಿಸಲು ಸಾಧ್ಯತೆಗಳನ್ನು ಹುಡುಕುವಂತೆ ಪ್ರತಿ ರಾಜ್ಯ ಸರ್ಕಾರಗಳು ತಮ್ಮ ವಕೀಲರಿಗೆ ಹೇಳಿದ್ದಾರೆ. ಹಲವು ರಾಜ್ಯಗಳಲ್ಲಿ ಏಪ್ರಿಲ್ ನಿಂದ ಜಾರಿಗೆ ಬಂದರೆ ಆಂಧ್ರ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಿಗೆ ಜೂನ್ ವರೆಗೆ ಕಾಲಾವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


