ಸಮುದ್ರ ಮಾರ್ಗವಾಗಿ ಭಾರತ ಪ್ರವೇಶಿಸಿದ ಉಗ್ರರು: ಮುಂಬೈನಲ್ಲಿ ಹೆಚ್ಚಿದ ಭದ್ರತೆ
ಸಮುದ್ರ ಮಾರ್ಗವಾಗಿ ಇಸಿಸ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ಪ್ರವೇಶ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಂಬೈನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ...

Published On :
ಮುಂಬೈ: ಸಮುದ್ರ ಮಾರ್ಗವಾಗಿ ಇಸಿಸ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ಪ್ರವೇಶ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಂಬೈನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.
ಸಮುದ್ರ ಮಾರ್ಗವನ್ನು ಬಳಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅ್ಯಂಡ್ ಇರಾನ್ ಉಗ್ರರು, ಭಾರತವನ್ನು ಪ್ರವೇಶ ಮಾಡಿರುವ ಶಂಕೆಗಳು ಮೂಡತೊಡಗಿದ್ದು, ದಾಳಿ ನಡೆಯುವ ಸಾಧ್ಯತೆಗಳಿವೆ ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಕರಾವಳಿ ಕಾವಲು ಪಡೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಕರಾವಳಿ ಕಾವಲು ಪಡೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಮುಂಬೈನಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಲಾಡ್ಜ್ ಗಳು ಹಾಗೂ ಹೋಟೆಲ್ ಗಳಲ್ಲಿ ಮಾಲೀಕರು ಗುರಿತಿನ ಚೀಟಿಗಳನ್ನು ಕೇಳದ ಕಾರಣ ಉಗ್ರರು ಹೋಟೆಲ್ ಗಳಲ್ಲಿ ತಂಗಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಮುಂಬೈನಲ್ಲಿರುವ ಹೋಟೆಲ್ ಗಳು ಹಾಗೂ ಲಾಡ್ಜ್ ಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಆರ್ಥಿಕ ನಗರಿ ಮುಂಬೈ ಮೇಲೆ ಈ ಹಿಂದೆ ಸಾಕಷ್ಟು ಬಾರಿ ಉಗ್ರರು ದಾಳಿ ನಡೆಸಿದ್ದಾರೆ. ಪ್ರಮುಖವಾಗಿ 26/11ರಲ್ಲಿ ಉಗ್ರರು ನಡೆಸಿದ್ದ ದಾಳಿ ಮರೆಯಲಾದ ಕರಾಳ ದಿನವೆಂದೇ ಇಂದಿಗೂ ನೆನೆಯಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


