ಗಿಲ್ಗಿಟ್-ಬಲ್ಟಿಸ್ತಾನ್ ಸೇರಿದಂತೆ ಇಡೀ ಕಾಶ್ಮೀರ ನಮ್ಮದು: ಪಾಕ್ ಗೆ ಸುಷ್ಮಾ ಎಚ್ಚರಿಕೆ
ಗಿಲ್ಗಿಟ್-ಬಲ್ಟಿಸ್ತಾನ್ ತನ್ನ ಐದನೇ ಪ್ರಾಂತ್ಯವನ್ನಾಗಿ ಘೋಷಿಸಲು ಮುಂದಾಗಿರುವ ಪಾಕಿಸ್ತಾನವನ್ನು ತೀವ್ರ ತರಾಟೆಗೆ...

Published On :
ನವದೆಹಲಿ: ಗಿಲ್ಗಿಟ್-ಬಲ್ಟಿಸ್ತಾನ್ ತನ್ನ ಐದನೇ ಪ್ರಾಂತ್ಯವನ್ನಾಗಿ ಘೋಷಿಸಲು ಮುಂದಾಗಿರುವ ಪಾಕಿಸ್ತಾನವನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಪಾಕಿಸ್ತಾನ ಆಕ್ರಮಿತ ಪ್ರದೇಶ ಸೇರಿದಂತೆ ಇಡೀ ಜಮ್ಮು ಮತ್ತು ಕಾಶ್ಮೀರ ಭಾರತಕ್ಕೆ ಸೇರಿದ್ದು ಎಂದು ಬುಧವಾರ ಹೇಳಿದ್ದಾರೆ.
ಇಂದು ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜು ಜನತಾ ದಳ ಸಂಸದ ಭರ್ತೃಹರಿ ಮೆಹ್ತಾಬ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸುಷ್ಮಾ ಸ್ವರಾಜ್, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದರ ಬಗ್ಗೆ ಯಾವುದೇ ಅನುಮಾನ ಬೇಡ. ಗಿಲ್ಗಿಟ್-ಬಲ್ಟಿಸ್ತಾನ್ ಸೇರಿದಂತೆ ಇಡೀ ಕಾಶ್ಮೀರ ನಮ್ಮದು ಎಂದು ಹೇಳಿದರು.
ಗಿಲ್ಗಿಟ್-ಬಲ್ಟಿಸ್ತಾನ್ ಪಾಕಿಸ್ತಾನದ ಐದನೇ ಪ್ರಾಂತ್ಯ ಎಂದು ಘೋಷಿಸಲು ಪಾಕಿಸ್ತಾನ ನಿರ್ಧರಿಸಿದೆ. ಆದರೆ ಪಾಕಿಸ್ತಾನದ ಈ ನಿರ್ಧಾರವನ್ನು ಖಂಡಿಸಿ ಲೋಕಸಭೆ ಮತ್ತು ರಾಜ್ಯಸಭೆ ನಿರ್ಣಯ ಅಂಗೀಕರಿಸಬೇಕು ಎಂದು ಮೆಹ್ತಾಬ್ ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sushma Swarajಸುಷ್ಮಾ ಸ್ವರಾಜ್Gilgit-BaltistanEntire J&Kbelongs to Indiaಇಡೀ ಕಾಶ್ಮೀರಗಿಲ್ಗಿಟ್-ಬಲ್ಟಿಸ್ತಾನ್ಭಾರತಕ್ಕೆ ಸೇರಿದ್ದು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


