ದೆಹಲಿ: ಶ್ರೇಷ್ಠ ವಿಹಾರ್'ನಲ್ಲಿ ಅಗ್ನಿ ಅವಘಡ, ಇಬ್ಬರಿಗೆ ಗಾಯ
ದೆಹಲಿಯ ಬಹುಮಹಡಿ ಕಟ್ಟಡ ಶ್ರೇಷ್ಠ ವಿಹಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...

Published On :
ನವದೆಹಲಿ: ದೆಹಲಿಯ ಬಹುಮಹಡಿ ಕಟ್ಟಡ ಶ್ರೇಷ್ಠ ವಿಹಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಏರ್ ಕಂಡೀಷರ್ ನಲ್ಲಿ ಉಂಟಾಗಿದ್ದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಗ್ನಿ ಅವಘಟ ಸಂಭವಿಸದೆ ಎಂದು ಹೇಳಲಾಗುತ್ತಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ 20 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಗಾಯಾಳುಗಳು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


