ಆಪ್ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂದಿದೆ ಎಂದು ವಿಕೆ ಶುಂಗ್ಲು ನೇತೃತ್ವದ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಿಬಿಐ...

Published On :
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂದಿದೆ ಎಂದು ವಿಕೆ ಶುಂಗ್ಲು ನೇತೃತ್ವದ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಆಪ್ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿದೆ.
ವಿದೇಶ ಪ್ರವಾಸ, ಅನರ್ಗರಿಗೆ ಅಕ್ರಮವಾಗಿ ನೇಮಕಾತಿ ಮಾಡಿರುವುದು ಸೇರಿದಂತೆ ಸಾರ್ವಜನಿಕ ಹಣವನ್ನು ಆಮ್ ಆದ್ಮಿ ಪಕ್ಷ ಹೇಗೆ ಪೋಲು ಮಾಡಿದೆ ಎಂಬುದನ್ನು ಶುಂಗ್ಲು ಸಮಿತಿ ವರದಿ ಬಹಿರಂಗಪಡಿಸಿದೆ. ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರದಲ್ಲಿ ಮಾಡಲಾಗಿರುವ ಎಲ್ಲಾ ಅಕ್ರಮ ನೇಮಕಾತಿಗಳ ಬಗ್ಗೆ ಹಾಗೂ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಬಿಜೆಪಿ ವಕ್ತಾರೆ ಮೀನಾಕ್ಷಿ ಲೇಖಿ ಆಗ್ರಹಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಮಾಡಿರುವ ಎಲ್ಲಾ ಅಕ್ರಮ ನೇಮಕಾತಿಗಳನ್ನೂ ರದ್ದುಗೊಳಿಸಬೇಕು. ಒಂದು ವೇಳೆ ರದ್ದುಗೊಳಿಸದೇ ಇದ್ದಲ್ಲಿ, ಕೋರ್ಟ್ ಕ್ರಮ ಕೈಗೊಳ್ಳಲಿದೆ ಎಂದು ಮೀನಾಕ್ಷಿ ಲೇಖಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


