ವಿಟೋ ಅಧಿಕಾರದೊಂದಿಗೆ ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ಖಚಿತ: ಸುಷ್ಮಾ ಸ್ವರಾಜ್
ವಿಟೋ ಅಧಿಕಾರದೊಂದಿಗೆ ಶೀಘ್ರದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಭರವಸೆ ವ್ಯಕ್ತಪಡಿಸಿದ್ದಾರೆ...

Published On :
ನವದೆಹಲಿ: ವಿಟೋ ಅಧಿಕಾರದೊಂದಿಗೆ ಶೀಘ್ರದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ಭರವಸೆ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿರುವ ಅವರು, ವಿಟೋ ಅಧಿಕಾರೊಂದಿಗೆ ಖಾಯಂ ಸದಸ್ಯತ್ವ ಪಡೆಯುವ ಎಲ್ಲಾ ಅರ್ಹತೆಗಳೂ ಭಾರತಕ್ಕಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿರುವ ಅಮೆರಿಕ, ರಷ್ಯಾ, ಬ್ರಿಟನ್ ಮತ್ತು ಫ್ರಾನ್ಸ್ ರಾಷ್ಟ್ರಗಳು ಭಾರತದ ಪ್ರಯತ್ನಕ್ಕೆ ಬೆಂಬಲ ಸೂಚಿಸಿದೆ. ಸದಸ್ಯದಲ್ಲೇ ವಿಟೋ ಅಧಿಕಾರದೊಂದಿಗೆ ಪ್ರತಿಫಲ ಸಿಗಲಿದೆ ಎಂದು ಹೇಳಿದ್ದಾರೆ.
ಭಾರತದ ಉಮೇದುವಾರಿಕೆಗೆ ಭದ್ರತಾ ಮಂಡಳಿಯ ಹಾಲಿ ಶಾಶ್ವತ ಸದಸ್ಯ ರಾಷ್ಟ್ರಗಳ ಪೈಕಿ 5ನೇ ರಾಷ್ಟ್ರ ಚೀನಾ ಮಾತ್ರ ಆಕ್ಷೇಪ ವ್ಯಕ್ತಪಡಿಸಿದ್ದರೂ, ಆ ರಾಷ್ಟ್ರವಾಗಿ ಬಹಿರಂಗವಾಗಿ ಭಾರತದ ಪ್ರಯತ್ನವನ್ನು ವಿರೋಧಿಸಿಲ್ಲ. ಹೀಗಾಗಿ ಈಗ ಸಾಧ್ಯವಾಗದಿದ್ದರೂ ಮುಂದಿನ ದಿನಗಳಲ್ಲಿ ಭಾರತಕ್ಕೆ ಯಶಸ್ಸು ದೊರೆಯುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ರಾಜತಾಂತ್ರಿಕ ಪ್ರಯತ್ನಗಳು ಮುಂದುವರೆದಿವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


