ಜಮ್ಮು-ಕಾಶ್ಮೀರ ಪ್ರವಾಹ: ಮೆಹಬೂಬಾ ಮುಫ್ತಿಗೆ ಪ್ರಧಾನ ಮೋದಿ ಕರೆ, ನೆರವಿನ ಭರವಸೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಕರೆ ಮಾಡಿ ಮಾತನಾಡಿದ್ದು, ಕೇಂದ್ರ ವತಿಯಿಂದ ಅಗತ್ಯ ನೆರವು ನೀಡುವುದಾಗಿ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಕರೆ ಮಾಡಿ ಮಾತನಾಡಿದ್ದು, ಕೇಂದ್ರ ವತಿಯಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ದಿನಗಳಿಂದಲೂ ಸುಧೀರ್ಘವಾಗಿ ಭಾರೀ ಹಿಮಪಾತ ಹಾಗೂ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇದರಂತೆ ನಿನ್ನೆ ಮುಫ್ತಿಯವರು ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ಕರೆದು ಪರಿಸ್ಥಿತಿ ವರದಿಯನ್ನು ಪಡೆದುಕೊಂಡಿದ್ದರು.
ಪ್ರವಾಹ ಭೀತಿ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾಶ್ಮೀರ ಪರಿಸ್ಥಿತಿ ಕುರಿತಂತೆ ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಕೇಂದ್ರದ ವತಿಯಿಂದ ಸಾಧ್ಯವಾದಷ್ಟು ನೆರವು ನೀಡುವುದಾಗಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ModiMehbooba Muftiಮೆಹಬೂಬಾ ಮುಫ್ತಿಮೋದಿಕೇಂದ್ರ ನೆರವುJammu and Kashmir floodCentre helpಜಮ್ಮುಮತ್ತು ಕಾಶ್ಮೀರ ಪ್ರವಾಹ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


