ಕೇಜ್ರಿವಾಲ್ ನನ್ನ ಕನಸನ್ನು ನುಚ್ಚು ನೂರು ಮಾಡಿದರು: ಅಣ್ಣಾ ಹಜಾರೆ ಅಸಮಾಧಾನ
ಸಾಮಾಜಿಕ ಹೋರಾಟಗಾರ ಕಿಷನ್ ಬಾಬುರಾವ್ ಹಜಾರೆ ಅಲಿಯಾಸ್ ಅಣ್ಣಾ ಹಜಾರೆ ಮತ್ತೊಮ್ಮೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On :
ರಾಲೇಗಣ್ ಸಿದ್ಧಿ: ಸಾಮಾಜಿಕ ಹೋರಾಟಗಾರ ಕಿಷನ್ ಬಾಬುರಾವ್ ಹಜಾರೆ ಅಲಿಯಾಸ್ ಅಣ್ಣಾ ಹಜಾರೆ ಮತ್ತೊಮ್ಮೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಶುಂಗ್ಲು ಸಮಿತಿ ವರದಿಯಲ್ಲಿ ಉಲ್ಲೇಖವಾಗಿರುವ ಆರೋಪಗಳ ಬಗ್ಗೆ ತಿಳಿದು ನೋವುಂಟಾಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕೇಜ್ರಿವಾಲ್ ನನ್ನೊಂದಿಗೆ ಇದ್ದರು. ಆ ಸಮಯದಲ್ಲಿ ದೇಶದ ವಿದ್ಯಾವಂತ ಹೊಸ ಪೀಳಿಗೆ ಭ್ರಷ್ಟಾಚಾರದ ವಿರುದ್ಧ ತಿರುಗಿ ಬೀಳಲಿದೆ ಎಂಬ ಕನಸು ಕಂಡಿದ್ದೆ. ಆದರೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ನನ್ನ ಜೊತೆಗಿದ್ದ ಕೇಜ್ರಿವಾಲ್ ಅವರೇ ನನ್ನ ಕನಸುಗಳನ್ನು ನುಚ್ಚು ನೂರು ಮಾಡಿದ್ದಾರೆ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷವೆಂಬ ಹೊಸ ಪಕ್ಷ ಸ್ಥಾಪಿಸಿದಾಗ ಅದರಿಂದ ದೂರ ಉಳಿಯುವಂತೆ ದೇವರೇ ನನಗೆ ಬುದ್ಧಿ ನೀಡಿದ, ಆಮ್ ಆದ್ಮಿ ಪಕ್ಷದಿಂದ ದೂರ ಉಳಿಯದೇ ಇದ್ದಿದ್ದರೆ ನನ್ನ ಗೌರವವೂ ಹಾಳಾಗಿರುತ್ತಿತ್ತು ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಕೇಜ್ರಿವಾಲ್ ಪಕ್ಷ ಸ್ಥಾಪಿಸಿದಾಗಿನಿಂದ ಮುಖ್ಯಮಂತ್ರಿಯಾಗುವವರೆಗೆ ಅವರನ್ನು ಭೇಟಿಯಾಗುವುದಕ್ಕೆ ನನಗೆ ಇಷ್ಟ ಇರಲಿಲ್ಲ. ನನ್ನನ್ನು ಅವರ ಗುರು ಎಂದು ಏಕೆ ಹೇಳುತ್ತಿದ್ದರು ಎಂದು ಈಗ ನನಗೆ ಅರ್ಥವಾಗಿದೆ. ದೇವರೇ ನನ್ನನ್ನು ಕಾಪಾಡಿದ್ದಾನೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


