ಭಾರತಕ್ಕೆ ಆಗಮಿಸಿದ ಬಾಂಗ್ಲಾ ಪ್ರಧಾನಿ: ಶಿಷ್ಟಾಚಾರ ಬದಿಗೊತ್ತಿ ಶೇಖ್ ಹಸೀನಾರನ್ನು ಸ್ವಾಗತಿಸಿದ ಪ್ರಧಾನಿ ಮೋದಿ
4 ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ಶಿಷ್ಟಾಚಾರಗಳನ್ನು ಬದಿಗೊತ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

Published On :
ನವದೆಹಲಿ: 4 ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ಶಿಷ್ಟಾಚಾರಗಳನ್ನು ಬದಿಗೊತ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣದಲ್ಲೇ ಸ್ವಾಗತಿಸಿದ್ದಾರೆ.
ಶೇಖ್ ಹಸೀನಾ ಅವರು ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿಯವರು ಶೇಖ್ ಹಸೀನಾ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿನ ತಮ್ಮ ನಿವಾಸದಿಂದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದರು. ಪ್ರಯಾಣದ ವೇಳೆ ರಸ್ತೆಗಳಲ್ಲಿ ಯಾವುದೇ ನಿರ್ಬಂಧಗಳನ್ನು ಹೇರದೇ ಸಾಮಾನ್ಯರಂತೆ ತೆರಳಿದರು ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ.
ಏಳು ವರ್ಷದ ನಂತರ ಬಾಂಗ್ಲಾದೇಶದ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸುತ್ತಿದ್ದಾರೆ. 4 ದಿನಗಳ ಕಾಲ ಭಾರತದಲ್ಲಿರುವ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಭಾರತ ಬಾಂಗ್ಲಾದೇಶಕ್ಕೆ 500 ಮಿಲಿಯನ್ ಡಾಲರ್ ನೆರವು ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಹಸೀನಾ ಅವರ ಪ್ರವಾಸದ ವೇಳೆ 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


