ರಾಷ್ಟ್ರಗೀತೆಗೆ ಅಗೌರವ ಆರೋಪ: ಜಮ್ಮು ವಿ.ವಿ. ಕ್ರೀಡಾ ಕೂಟಕ್ಕೆ ಎಬಿವಿಪಿ ತಡೆ
ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಧ್ವಜಕ್ಕೆ ಅಗೌರವ...

Published On :
ಜಮ್ಮು: ಉದ್ಘಾಟನಾ ಸಮಾರಂಭದಲ್ಲಿ ಜಮ್ಮು-ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದ್ದಾರೆ ಎಂಬ ಕಾರಣಕ್ಕೆ ಅಲ್ಲಿ ನಡೆಯುತ್ತಿರುವ ಅಂತರ ವಿಶ್ವವಿದ್ಯಾಲಯ ಕ್ರೀಡಾ ಕೂಟವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಲ್ಲಿಸಿದ ಘಟನೆ ಇಂದು ನಡೆದಿದೆ.
ಎಲ್ಲಾ ಪಂದ್ಯಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳು ಮೈದಾನ ಬಿಟ್ಟು ಹೋಗುವಂತೆ ಸೂಚಿಸಿದರು.
ಭಾರತ ಮಾತೆಗೆ ಅವಮಾನ ಮಾಡಿದರೆ ಹಿಂದೂಸ್ತಾನ ಸಹಿಸುವುದಿಲ್ಲ ಎಂಬ ಘೋಷಣೆಯನ್ನು ಎಬಿವಿಪಿ ಕಾರ್ಯಕರ್ತರು ಕೂಗುತ್ತಾ ಮೈದಾನದುದ್ದಕ್ಕೂ ಸಾಗಿದರು. ಹಿಂದೂಸ್ತಾನದಲ್ಲಿ ಬದುಕಬೇಕೆಂದರೆ ವಂದೇ ಮಾತರಂನ್ನು ಹಾಡಲೇಬೇಕು ಎಂದು ಹೇಳಿದರು.
ಈ ಬಗ್ಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಎಬಿವಿಪಿ ನಾಯಕ ಅವತಾರ್ ಸಿಂಗ್ ಜಸ್ರೋಟಿಯಾ, ಮಾರ್ಚ್ 5ರಂದು ಜಮ್ಮು-ಕಾಶ್ಮೀರದ ಹಲವು ವಿದ್ಯಾರ್ಥಿಗಳು ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದಲ್ಲದೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವಿದ್ಯಾರ್ಥಿಗಳಿಂದ ಕ್ಷಮಾಪಣಾ ಪತ್ರ ಪಡೆದುಕೊಳ್ಳುವಂತೆ 48 ಗಂಟೆಗಳ ಕಾಲಾವಧಿಯನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ನೀಡಿದ್ದೆವು. ಆದರೆ ವಿವಿ ಆಡಳಿತ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಹಾಗಾಗಿ ಕ್ರೀಡೆಯನ್ನು ನಿಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


