ಮಮತಾ ಬ್ಯಾನರ್ಜಿ ಸರ್ವಾಧಿಕಾರತ್ವ ನಡೆಸುತ್ತಿದ್ದಾರೆ, ಪೊಲೀಸ್ ದುರ್ಬಳಕೆ ಮಾಡುತ್ತಿದ್ದಾರೆ: ರಿಜಿಜು
ರಾಮನವಮಿ ಹಬ್ಬದಂದು ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಖಡ್ಗ, ತ್ರಿಶೂಲ ಹಿಡಿದಿದ್ದ ಬಿಜೆಪಿ ಮುಖಂಡರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ವಿರೋಧ ವ್ಯಕ್ತಪಡಿಸಿದ್ದಾರೆ.

Published On :
ಕೋಲ್ಕತ್ತಾ: ರಾಮನವಮಿ ಹಬ್ಬದಂದು ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಖಡ್ಗ, ತ್ರಿಶೂಲ ಹಿಡಿದಿದ್ದ ಬಿಜೆಪಿ ಮುಖಂಡರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ವಿರೋಧ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಆರೋಪ ಮಾಡಿರುವ ಕಿರಣ್ ರಿಜಿಜು, ರಾಜ್ಯದಲ್ಲಿ ಮಮತಾ ಬ್ಯಾನರ್ಜಿ ಸರ್ವಾಧಿಕಾರತ್ವ ನಡೆಸುತ್ತಿದ್ದಾರೆ. ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿರಣ್ ರಿಜಿಜು ಆರೋಪಿಸಿದ್ದಾರೆ.
ರಾಮನವಮಿ ಹಬ್ಬದಂದು ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಬಿಜೆಪಿ ಮುಖಂಡರು, ಪರವಾನಗಿ ಇಲ್ಲದ ಶಸ್ತ್ರಾಸ್ತ್ರಗಳನ್ನು ಹಿಡಿದಿರಲಿಲ್ಲ. ಬದಲ್ಲಾಗಿ ಖಡ್ಗ, ತ್ರಿಶೂಲವನ್ನು ಹಿಡಿದಿದ್ದರು, ಖಡ್ಗ, ತ್ರಿಶೂಲ ಸಾಂಸ್ಕೃತಿ ಹಾಗೂ ಸಾಂಕೇತಿಕ ಶಸ್ತ್ರಗಳಷ್ಟೇ ಎಂದು ಕಿರಣ್ ರಿಜಿಜು ಸಮರ್ಥನೆ ನೀಡಿದ್ದು, ರಾಜಕೀಯ ವೈರಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮಮತಾ ಬ್ಯಾನರ್ಜಿ ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು ಮಮತಾ ಬ್ಯಾನರ್ಜಿ ಸರ್ವಾಧಿಕಾರತ್ವ ನಡೆಸುತ್ತಿದ್ದಾರೆ ಎಂದು ಕಿರಣ್ ರಿಜಿಜು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kiren Rijijuಕಿರಣ್ ರಿಜಿಜುMamata Banerjee governmentDictatorship remarksಮಮತಾ ಬ್ಯಾನರ್ಜಿ ಸರ್ಕಾರಸರ್ವಾಧಿಕಾರತ್ವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


