ದೇಶ

ಕಾರು ನಿಲ್ಲಿಸಿ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವರಿಗೆ ಹೆಲ್ಮೆಟ್ ಧರಿಸುವಂತೆ ಸಚಿನ್ ಸೂಚನೆ

ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕಾರು ನಿಲ್ಲಿಸಿ ಬೈಕ್ ನಲ್ಲಿ ಹೆಲ್ಮೆಟ್ ಇಲ್ಲದೆ...

ಕಾರು ನಿಲ್ಲಿಸಿ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವರಿಗೆ ಹೆಲ್ಮೆಟ್ ಧರಿಸುವಂತೆ ಸಚಿನ್ ಸೂಚನೆ
ಸಚಿನ್ ತೆಂಡೂಲ್ಕರ್
Published On :
ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕಾರು ನಿಲ್ಲಿಸಿ ಬೈಕ್ ನಲ್ಲಿ ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕರಿಗೆ ಹೆಲ್ಮೆಟ್ ಧರಿಸುವಂತೆ ಸೂಚಿಸಿದ್ದಾರೆ. 
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಚಿನ್ ಅವರು ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕರನ್ನು ನೋಡಿದ್ದಾರೆ. ಈ ವೇಳೆ ಮುಂದಕ್ಕೆ ಹೋಗಿ ಕಾರನ್ನು ನಿಲ್ಲಿಸಿ ಕಾರಿನ ಕಿಟಕಿ ಗಾಜನ್ನು ಕೆಳಗೆ ಇಳಿಸಿದ್ದಾರೆ. ಸಚಿನ್ ಕಂಡ ಯುವಕರು ಸೆಲ್ಫಿ ತೆಗೆದುಕೊಳ್ಳು ಮುಂದಾಗುತ್ತಿದ್ದಾಗ ಅವರಿಗೆ ಮೊದಲು ಹೆಲ್ಮೆಟ್ ಧರಿಸುವಂತೆ ಸೂಚಿಸಿದ್ದಾರೆ. ಇದರಿಂದ ಯುವಕರು ತಾವು ಇನ್ಮುಂದೆ ಹೆಲ್ಮೆಟ್ ಬಳಸುವುದಾಗಿ ಸಚಿನ್ ಅವರಿಗೆ ಹೇಳಿದರು.
ರಸ್ತೆ ಸುರಕ್ಷತೆ ಬಗ್ಗೆ ಸಚಿನ್ ಅವರು ಯುವರಿಗೆ ಜಾಗೃತಿ ಮೂಡಿಸಿರುವುದು ಉತ್ತಮ ನಿದರ್ಶನವಾಗಿದೆ. ಈ ವಿಡಿಯೋವನ್ನು ಸಚಿನ್ ಅವರು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದು ವೈರಲ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.