ದೇಶ

ಪ್ರಧಾನಿ ಮೋದಿ ಭಾರತವನ್ನು ಅಭಿವೃದ್ಧಿ, ಬೆಳವಣಿಗೆಯತ್ತ ಮುನ್ನಡೆಸುತ್ತಿದ್ದಾರೆ: ಆಸ್ಟ್ರೇಲಿಯಾ ಪ್ರಧಾನಿ ಶ್ಲಾಘನೆ

ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್ಬುಲ್ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ, ಬೆಳವಣಿಗೆಯ ಮಾದರಿಯ ಬಗ್ಗೆ ಮೆಚ್ಚುಗೆ...

ಪ್ರಧಾನಿ ಮೋದಿ ಭಾರತವನ್ನು ಅಭಿವೃದ್ಧಿ, ಬೆಳವಣಿಗೆಯತ್ತ ಮುನ್ನಡೆಸುತ್ತಿದ್ದಾರೆ: ಆಸ್ಟ್ರೇಲಿಯಾ ಪ್ರಧಾನಿ ಶ್ಲಾಘನೆ
ನರೇಂದ್ರ ಮೋದಿ-ಮಾಲ್ಕಂ ಟರ್ನ್ಬುಲ್
Published On :
ನವದೆಹಲಿ: ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್ಬುಲ್ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ, ಬೆಳವಣಿಗೆಯ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತ-ಆಸ್ಟ್ರೇಲಿಯಾದ ದ್ವಿಪಕ್ಷೀಯ ಬಾಂಧವ್ಯ ಈ ಭೇಟಿಯಿಂದ ಮತ್ತಷ್ಟು ವೃದ್ಧಿಯಾಗಲಿದೆ. ಅತ್ಯದ್ಭುತ ಭಾರತ ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಹಾಗೂ ಬೆಳವಣಿಗೆ ಪಥದಲ್ಲಿ ಮುನ್ನಡೆಸುತ್ತಿದ್ದಾರೆ, ಭಾರತದ ಸಾಧನೆಗಳು ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಆಸ್ಟ್ರೇಲಿಯಾದಲ್ಲಿರುವ ಅರ್ಧ ಮಿಲಿಯನ್ ನಷ್ಟು ಜನರು ಭಾರತೀಯ ಹಿನ್ನೆಲೆಯುಳ್ಳವರಾಗಿದ್ದಾರೆ. ಭಾರತದೊಂದಿಗೆ ಮತ್ತಷ್ಟು ನಿಕಟವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ಪಡೆದ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್ಬುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಮಾಲ್ಕಂ ಟರ್ನ್ಬುಲ್ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು, ಏ.09 ರಿಂದ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.