2019ರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕೇವಲ 20 ಸೀಟುಗಳು ಮಾತ್ರ: ವಿಶ್ವಜಿತ್ ರಾಣೆ
2019 ರ ಲೋಕಸಭೆ ಚುನಾವಣೆಯಲ್ಲಿ ಪುರಾತನ ಪಕ್ಷವಾದ ಕಾಂಗ್ರೆಸ್ ಕೇವಲ 20 ಸೀಟುಗಳಲ್ಲಿ ಮಾತ್ರ ಜಯ ಸಾಧಿಸಲಿದೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ...

Published On :
ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಪುರಾತನ ಪಕ್ಷವಾದ ಕಾಂಗ್ರೆಸ್ ಕೇವಲ 20 ಸೀಟುಗಳಲ್ಲಿ ಮಾತ್ರ ಜಯ ಸಾಧಿಸಲಿದೆ ಎಂದು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡಯಾದ ವಿಶ್ವಜಿತ್ ರಾಣೆ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಗೋವಾ ಮಾಜಿ ಮುಖ್ಯಮಂತ್ರಿ ಪ್ರತಾಪ್ ಸಿನ್ಹಾ ರಾಣೆ ಅವರ ಪುತ್ರ ವಿಶ್ವಜಿತ್ ರಾಣೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರತೆಯಿಲ್ಲದ ನಾಯಕ, ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಕೇವಲ 20 ಸೀಟುಗಳನ್ನು ಮಾತ್ರ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಗೋವಾ ನಾಗರಿಕರು ನೀಡಿದ ಜನಾದೇಶವನ್ನು ರಾಹುಲ್ ಗಾಂಧಿ ಗಂಭೀರವಾಗಿ ಪರಿಗಣಿಸಲಿಲ್ಲ, ಹೀಗಾಗಿ ಅವರು ಗೋವಾದಲ್ಲಿ ಸರ್ಕಾರ ರಚಿಸಲು ಮುಂದಾಗಲಿಲ್ಲ ಎಂದು ಹೇಳಿದ್ದಾರೆ, ಕಳೆದ ಫೆಬ್ರವರಿ 4 ರಂದು ನಡೆದ ಗೋವಾ ವಿಧಾನ ಸಭೆ ಚುನಾವಣೆಯಲ್ಲಿ ವಿಶ್ವಜಿತ್ ರಾಣೆ ವಲ್ಪೋಯಿ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. ಆದರೆ ಸರ್ಕಾರ ರಚಿಸುವಲ್ಲಿ ಕಾಂಗ್ರೆಸ್ ವಿಫಲವಾದ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressRahul Gandhiರಾಹುಲ್ ಗಾಂಧಿ2019 Election20 SeatsVishwajit Rane. ಕಾಂಗ್ರೆಸ್2019 ರಚುನಾವಣೆವಿಶ್ವಜಿತ್ ರಾಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


