ಚೆನ್ನೈ: ಆರ್ ಕೆ ನಗರ ಉಪ ಚುನಾವಣೆ ರದ್ದು
ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ..

ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ರದ್ದುಗೊಳಿಸಿದೆ.
ಆರ್ ಕೆ ನಗರದಲ್ಲಿನ ಮತದಾರರಿಗೆ ಮತ ಹಾಕಲು ವ್ಯಾಪಕ ಹಣ ಹಂಚಲಾಗಿದೆ ಎಂಬ ಆರೋಪದ ಮೇರೆಗೆ ಚುನಾವಣಾ ಆಯೋಗ ಈ ಕಠಿಣ ಕ್ರಮವನ್ನು ಕೈಗೊಂಡಿದೆ. ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆಗಾಗಿ ಅಭ್ಯರ್ಥಿಗಳು ಮತದಾರರಿಗೆ ವ್ಯಾಪಕ ಹಣದ ಆಮಿಷ ಒಡ್ಡಿದ್ದಾರೆ. ಪ್ರತೀ ಓಟಿಗೆ ಬರೊಬ್ಬರಿ 4 ಸಾವಿರ ರುಗಳಂತೆ ಹಣ ಹಂಚಿಕೆ ಮಾಡಿದ್ದು, ಈ ರೀತಿ ಸುಮಾರು 2.24 ಲಕ್ಷ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಧನದಿಂದಾಗಿ ಚೆನ್ನೈನ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ಹಣದ ಹೊಳೆ ಹರಿದ ಕಾರಣ ಉಪಚುನಾವಣೆಯನ್ನೇ ಚುನಾವಣಾ ಆಯೋಗ ಭಾನುವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಪ್ರತಿ ಮತದಾರರಿಗೂ ಅಣ್ಣಾಡಿಎಂಕೆಯ ಆಡಳಿತಾರೂಢ (ಶಶಿಕಲಾ) ಬಣ 4 ಸಾವಿರ ರು. ಹಂಚಿದೆ ಎಂಬ ಮಾಹಿತಿ ಆದಾಯ ತೆರಿಗೆ ದಾಳಿ ವೇಳೆ ಖಚಿತಪಟ್ಟಿತ್ತು. ತಮಿಳುನಾಡು ಚುನಾವಣಾ ಆಧಿಕಾರಿಗಳ ಜತೆ ಹಲವು ಸುತ್ತಿನ ಸಭೆಯ ಬಳಿಕ ಆಯೋಗ ಏಪ್ರಿಲ್ 12ರಂದು ನಿಗದಿಯಾಗಿರುವ ಚುನಾವಣೆಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿದೆ. ಜನರು ಆಸೆ, ಆಮಿಷಗಳಿಂದ ದೂರವಾಗಿ ಪಾರದರ್ಶಕ ವಾತಾವರಣ ನಿರ್ಮಾಣವಾದ ಬಳಿಕ ಮತ್ತೊಮ್ಮೆ ಚುನಾವಣೆ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಹಿಂದೆ ಹಣ ಬಲದಿಂದ ಚುನಾವಣೆ ಎದುರಿಸಿದ ಕಾರಣಕ್ಕಾಗಿ ಅವರ್ಕುರುಚಿ ಮತ್ತು ತಂಜಾವೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಆಯೋಗ ರದ್ದುಗೊಳಿತ್ತು. ಈಗ ಮತ್ತೊಮ್ಮೆ ತಮಿಳುನಾಡಿನಲ್ಲಿ ಇದೇ ಕಾರಣಕ್ಕಾಗಿ ಚುನಾವಣೆಯನ್ನು ಆಯೋಗ ರದ್ದುಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


