ದೇಶ

ಜಾಧವ್ ಗೆ ಗಲ್ಲು ಶಿಕ್ಷೆ 'ಪೂರ್ವ ಯೋಜಿತ ಕೊಲೆ': ಪಾಕ್ ಗೆ ಕಠಿಣ ಸಂದೇಶ ರವಾನಿಸಿದ ಭಾರತ

ಭಾರತದ ಪರ ಬೇಹುಗಾರಿಕೆ ನಡೆಸುತ್ತಿರುವ ಆರೋಪ ಎದುರಿಸುತ್ತಿದ್ದ ಕುಲ್‌ ಭೂಷಣ್‌ ಜಾಧವ್‌ ಅವರಿಗೆ ಪಾಕಿಸ್ತಾನ ಸೇನೆ ಗಲ್ಲು ಶಿಕ್ಷೆ....

ಜಾಧವ್ ಗೆ ಗಲ್ಲು ಶಿಕ್ಷೆ 'ಪೂರ್ವ ಯೋಜಿತ ಕೊಲೆ': ಪಾಕ್ ಗೆ ಕಠಿಣ ಸಂದೇಶ ರವಾನಿಸಿದ ಭಾರತ
ಕುಲಭೂಷಣ್ ಜಾಧವ್
Published On :
ನವದೆಹಲಿ: ಭಾರತದ ಪರ ಬೇಹುಗಾರಿಕೆ ನಡೆಸುತ್ತಿರುವ ಆರೋಪ ಎದುರಿಸುತ್ತಿದ್ದ ಕುಲ್‌ ಭೂಷಣ್‌ ಜಾಧವ್‌ ಅವರಿಗೆ ಪಾಕಿಸ್ತಾನ ಸೇನೆ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಪೂರ್ವ ಯೋಜಿತ ಕೊಲೆ ಎಂದು ಹೇಳಿದೆ. ಅಲ್ಲದೆ ಈ ಸಂಬಂಧ ಪಾಕಿಸ್ತಾನಕ್ಕೆ ಸಮನ್ಸ್ ಜಾರಿ ಮಾಡುವ ಮೂಲಕ ಕಠಿಣ ಸಂದೇಶ ರವಾನಿಸಿದೆ.
ಈ ಸಂಬಂಧ ವಿದೇಶಾಂಗ ಸಚಿವಾಲಯ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಷಿತ್ ಅವರನ್ನು ಕರೆಸಿಕೊಂಡಿದ್ದು, ಜಾಧವ್ ಗಲ್ಲು ಶಿಕ್ಷೆ ಪ್ರಕ್ರಿಯೆ ತುಂಬಾ ಆತುರದ ನಿರ್ಧಾರವಾಗಿದ್ದು, ಒಂದು ವೇಳೆ ಅಗತ್ಯ ಕಾನೂನು ಮತ್ತು ನ್ಯಾಯಪಾಲನೆ ಮಾಡದಿದ್ದರೆ ಇದೊಂದು ಪೂರ್ಯ ಯೋಜಿತ ಕೊಲೆ ಎಂದು ಭಾರತ ಸರ್ಕಾರ ಭಾವಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.
ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆ ಮತ್ತು ವಿಚಾರಣೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಭಾರತದ ಹೈಕಮಿಷನರ್ ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಜಾಧವ್ ಗೆ ಗಲ್ಲು ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಬುಧವಾರ ತಾಯ್ನಾಡಿಗೆ ಮರಳಬೇಕಿದ್ದ ಪಾಕಿಸ್ತಾನದ 12 ಕೈದಿಗಳನ್ನು ಬಿಡುಗಡೆ ಮಾಡದಿರಲು ಭಾರತ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಕುಲ್‌ ಭೂಷಣ್‌ ಜಾಧವ್‌ ಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಗಲ್ಲು ಶಿಕ್ಷೆ ಪ್ರಕಟವಾಗಿರುವುದನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜಾವೇದ್ ಬಾಜ್ವಾ ಸ್ಪಷ್ಟಪಡಿಸಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್ ಪಿಆರ್) ಹೇಳಿದೆ. 
ಭಾರತದ ಪರ ಬೇಹುಗಾರಿಕೆ ನಡೆಸಿ, ಆಂತರಿಕ ಅಸ್ಥಿರತೆ ಉಂಟು ಮಾಡುತ್ತಿರುವ ಆರೋಪದಡಿ ಭೂಷಣ್‌ ಜಾಧವ್‌ ನ್ನು 2016 ಮಾ.3 ರಂದು ಬಲೂಚಿಸ್ಥಾನದಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.