ದೇಶ

ಪ್ರಧಾನಿ ಭೇಟಿ ಮಾಡಿದ ಮಮತಾ, ಪ.ಬಂಗಾಳಕ್ಕೆ ಅನುದಾನ ನೀಡುವಂತೆ ಮನವಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು,....

ಪ್ರಧಾನಿ ಭೇಟಿ ಮಾಡಿದ ಮಮತಾ, ಪ.ಬಂಗಾಳಕ್ಕೆ ಅನುದಾನ ನೀಡುವಂತೆ ಮನವಿ
ಮಮತಾ ಬ್ಯಾನರ್ಜಿ, ನರೇಂದ್ರ ಮೋದಿ
Published On :
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಬಾಕಿ ಇರುವ 10 ಸಾವಿರ ಕೋಟಿ ರುಪಾಯಿ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಸುಮಾರು ಅರ್ಧ ಗಂಟೆಗಳ ಕಾಲ ಪ್ರಧಾನಿಯೊಂದಿಗೆ ರಾಜ್ಯದಲ್ಲಿನ ಬರದ ಬಗ್ಗೆ ಚರ್ಚೆ ನಡೆಸಿದ ಮಮತಾ, ರಾಜ್ಯದ ರೈತರ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರದ ಅನದಾನಿತ ವಿವಿಧ ಯೋಜನೆಗಳಿಗೆ ಅನುದಾನ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ ಈ ವೇಳೆ ಬಾಂಗ್ಲಾದೇಶದೊಂದಿಗಿನ ತೀಸ್ತಾ ನದಿ ನೀರಿನ ಹಂಚಿಕೆ ವಿವಾದದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಸುಮಾರು 10, 459 ಕೋಟಿ ರುಪಾಯಿ ಕೇಂದ್ರ ಅನುದಾನ ಬಾಕಿ ಇದ್ದು, ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ನಾನು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದರು. ಅಲ್ಲದೆ ಅನುದಾನ ಬಿಡುಗಡೆಯ ಭರವಸೆ ನೀಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.