ದೇಶ

ಆರ್.ಕೆ.ನಗರ ಚುನಾವಣೆ ರದ್ದು: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ಕಿಡಿ

ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿರುವ ಹಿನ್ನಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಪಿ.ಚಿದಂಬರಂ...

ಆರ್.ಕೆ.ನಗರ ಚುನಾವಣೆ ರದ್ದು: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ಕಿಡಿ
ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿರುವ ಹಿನ್ನಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಸೋಮವಾರ ಕಿಡಿಕಾರಿದ್ದಾರೆ. 
ಆರ್.ಕೆ. ನಗರ ಉಪ ಚುನಾವಣೆ ರದ್ದುಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರೂ.500 ಹಾಗೂ 1000 ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿದ ಬಳಿಕ ಕಪ್ಪುಹಣ ಅಂತ್ಯಗೊಳ್ಳಲಿದೆ ಎಂದು ಮೋದಿ ಸರ್ಕಾರ ಹೇಳಿತ್ತು. ಆರ್.ಕೆ.ನಗರದಲ್ಲಿ ಹಂಚಿದ್ದು, ಕಾನೂನು ಬದ್ಧ ಹಣವೇ ಎಂದು ಪ್ರಶ್ನಿಸಿದ್ದಾರೆ.
ಏಪ್ರಿಲ್ 12ರಂದು ನಡೆಯಬೇಕಿದ್ದ ಚುನಾವಣೆಗಾಗಿ   ಅಭ್ಯರ್ಥಿಗಳು ಮತದಾರರಿಗೆ ವ್ಯಾಪಕ ಹಣದ ಆಮಿಷ ಒಡ್ಡಿದ್ದಾರೆ. ಪ್ರತೀ ಓಟಿಗೆ ಬರೊಬ್ಬರಿ 4 ಸಾವಿರ ರುಗಳಂತೆ ಹಣ ಹಂಚಿಕೆ ಮಾಡಿದ್ದು, ಈ ರೀತಿ ಸುಮಾರು 2.24 ಲಕ್ಷ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ  ಗಂಭೀರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಂಡು ಉಪಚುನಾವಣೆಯನ್ನೇ ರದ್ದುಗೊಳಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.