ದೇಶ

ಸುಂದರವಾಗಿಲ್ಲ ಎಂಬ ಕಾರಣಕ್ಕೆ ಪತಿಯನ್ನೇ ಹತ್ಯೆ ಮಾಡಿದ ನವ ವಧು

ಹೊಸದಾಗಿ ಮದುವೆಯಾಗಿದ್ದ ಮಹಿಳೆಯೊಬ್ಬರು ತನ್ನ ಪತಿ ಸುಂದರವಾಗಿಲ್ಲ ಎಂಬ ಕಾರಣಕ್ಕೆ ಆತನ ತಲೆ ಮೇಲೆ ರುಬ್ಬುಗಲ್ಲು...

ಸುಂದರವಾಗಿಲ್ಲ ಎಂಬ ಕಾರಣಕ್ಕೆ ಪತಿಯನ್ನೇ ಹತ್ಯೆ ಮಾಡಿದ ನವ ವಧು
ಸಾಂದರ್ಭಿಕ ಚಿತ್ರ
Published On :
ಕುಡಲೂರು: ಹೊಸದಾಗಿ ಮದುವೆಯಾಗಿದ್ದ ಮಹಿಳೆಯೊಬ್ಬರು ತನ್ನ ಪತಿ ಸುಂದರವಾಗಿಲ್ಲ ಎಂಬ ಕಾರಣಕ್ಕೆ ಆತನ ತಲೆ ಮೇಲೆ ರುಬ್ಬುಗಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಕುಡಲೂರು ಜಿಲ್ಲೆಯಲ್ಲಿ ನಡೆದಿದೆ.
ಒಂದು ವಾರದ ಹಿಂದಷ್ಟೆ ಮದುವೆಯಾಗಿದ್ದ 22 ವರ್ಷದ ಮಹಿಳೆ ನಿನ್ನೆ ರಾತ್ರಿ ತನ್ನ ಪತಿಯೊಂದಿಗೆ ಜಗಳ ಮಾಡಿದ್ದು, ಈ ವೇಳೆ ಪತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮಹಿಳೆ ಸ್ನೇಹಿತರು ಮತ್ತು ಸಂಬಂಧಿಗಳು ನಿನ್ನ ಪತಿ ಸುಂದರವಾಗಿಲ್ಲ. ಆತ ನಿನಗೆ ಸರಿಯಾದ ಜೋಡಿ ಅಲ್ಲ ಎಂದು ಹೇಳಿದ್ದರಿಂದ ತೀವ್ರ ಬೇಸರಗೊಂಡಿದ್ದ ನವ ವಧು, ಪತಿಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿಯನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಳು. 
ತನಿಖೆ ನಡೆಸಿದ ಪೊಲೀಸರು ಪತಿಯನ್ನು ಕೊಂದ ಕೊಲೆಗಾತಿಯನ್ನು ಇಂದು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.