ದೇಶ

ತ್ರಿವಳಿ ತಲಾಖ್ ಮುಸ್ಲಿಂ ಮಹಿಳೆಯರ ಘನತೆಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲಿಖಿತ ಹೇಳಿಕೆ

ತ್ರಿವಳಿ ತಲಾಖ್, ನಿಖಾ ಹಲಾಲ ಮತ್ತು ಬಹುಪತ್ನಿತ್ವ ಪದ್ಧತಿಯಿಂದಾಗಿ ಸಮಾಜದಲ್ಲಿ ಮುಸಲ್ಮಾನ ಮಹಿಳೆ...

ತ್ರಿವಳಿ ತಲಾಖ್ ಮುಸ್ಲಿಂ ಮಹಿಳೆಯರ ಘನತೆಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಲಿಖಿತ ಹೇಳಿಕೆ
ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)
Published On :
ನವದೆಹಲಿ: ತ್ರಿವಳಿ ತಲಾಖ್, ನಿಖಾ ಹಲಾಲ ಮತ್ತು ಬಹುಪತ್ನಿತ್ವ ಪದ್ಧತಿಯಿಂದಾಗಿ ಸಮಾಜದಲ್ಲಿ ಮುಸಲ್ಮಾನ ಮಹಿಳೆಯರ ಗೌರವದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಂವಿಧಾನದಲ್ಲಿರುವ ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತಾಗುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಹೊಸ ಲಿಖಿತ ಸಲ್ಲಿಕೆಯಲ್ಲಿ ಕೇಂದ್ರ ಸರ್ಕಾರ ತನ್ನ ಈ ಹಿಂದಿನ ನಿಲುವಿಗೆ ಬದ್ಧವಾಗಿದ್ದು, ಈ ಪದ್ಧತಿಗಳನ್ನು ಪಾಲಿಸುವುದರಿಂದ ಮುಸಲ್ಮಾನ ಮಹಿಳೆಯರಿಗೆ ಸಮಾಜದಲ್ಲಿ ಅಸಮಾನತೆ ಉಂಟಾಗುತ್ತದೆ ಅಲ್ಲದೆ ಅವರನ್ನು ದುರ್ಬಲಗೊಳಿಸಿದಂತಾಗುತ್ತದೆ.ಮುಸಲ್ಮಾನ ಮಹಿಳೆಯರ ಗೌರವಕ್ಕೆ ಇದರಿಂದ ಧಕ್ಕೆಯುಂಟಾಗುವುದಲ್ಲದೆ ಎಂದು ಕೇಂದ್ರ ಸರ್ಕಾರ ವಿವರಿಸಿದೆ.
 ಮುಸಲ್ಮಾನರಲ್ಲಿ ಟ್ರಿಪಲ್ ತಲಾಖ್, ನಿಖಾಹ್ ಹಲಾಲ ಮತ್ತು ಬಹುಪತ್ನಿತ್ವ ಪ್ರಮುಖ ವಿಷಯಗಳಾಗಿದ್ದು ಇದು ಆ ಧರ್ಮೀಯರ ಭಾವನೆಗಳಿಗೆ ಸಂಬಂಧಿಸಿದ್ದಾಗಿದೆ. ಇದನ್ನು ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಮೇ 11ರಿಂದ ಸುಪ್ರೀಂ ಕೋರ್ಟ್ ನ ನ್ಯಾಯಪೀಠ ನಡೆಸಲಿದೆ. 
ಮುಸಲ್ಮಾನ ಸಮುದಾಯದಲ್ಲಿರುವ ಈ ಪದ್ಧತಿಗಳು ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಹೇಳಿರುವ ಸರ್ಕಾರ ಮುಸ್ಲಿಂ ಖಾಸಗಿ ಕಾನೂನಿನಲ್ಲಿ ಕಳೆದ 6 ದಶಕಗಳಲ್ಲಿ ಸುಧಾರಣೆಯೆಂಬುದಾಗಿಲ್ಲ. ಮುಸ್ಲಿಂ ಮಹಿಳೆಯರ ಸಂಖ್ಯೆ ದೇಶದಲ್ಲಿ ಶೇಕಡಾ 8ರಷ್ಟಿದ್ದು ಆ ಸಮುದಾಯದಲ್ಲಿನ ವಿಚ್ಛೇದನದಿಂದಾಗಿ ಮಹಿಳೆಯರ ಸ್ಥಾನಮಾನ, ಗೌರವಕ್ಕೆ ಚ್ಯುತಿ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.