ಬಿಕನೇರ್ ಭೂ ಹಗರಣ: ರಾಬರ್ಟ್ ವಾದ್ರಾ ಸಹವರ್ತಿಗಳ ಮನೆ ಮೇಲೆ ಇಡಿ ದಾಳಿ
ಬಿಕನೇರ್ ಭೂಹಗರಣ ಮತ್ತು ಹಣ ದುರುಪಯೋಗ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿ ...

Published On :
ನವದೆಹಲಿ: ಬಿಕನೇರ್ ಭೂಹಗರಣ ಮತ್ತು ಹಣ ದುರುಪಯೋಗ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಮೂರು ಪ್ರದೇಶಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ವ್ಯಕ್ತಿಗಳಿಗೆ ಸೇರಿದ ಫರೀದಾಬಾದ್ ನ ಮೂರು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳು ಕೇಸ್ ಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಇಬ್ಬರು ವ್ಯಕ್ತಿಗಳು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಸಹವರ್ತಿಗಳಾಗಿದ್ದಾರೆ.
ಹಣ ದುರುಪಯೋಗ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳಿಗೆ ಸೇರಿದ 1.18 ಕೋಟಿ ರು ಬೆಲೆ ಬಾಳುವ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


