ಪ್ರಿಯತಮೆ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಿಂದೂ ಯುವವಾಹಿನಿ ಕಾರ್ಯಕರ್ತರಿಂದ ಹಲ್ಲೆ
ಮೀರತ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದೆ. ಹಿಂದೂ ಯುವ ವಾಹಿನಿ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ಯುವಕನೊಬ್ಬನ ಮನೆಗೆ ನುಗ್ಗಿ ...

Published On :
ಮೀರತ್ : ಮೀರತ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದೆ. ಹಿಂದೂ ಯುವ ವಾಹಿನಿ ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ಯುವಕನೊಬ್ಬನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ.
ಮೀರತ್ನ ಶಾಸ್ತ್ರಿ ನಗರದ ಮುಸ್ಲಿಂ ಯುವಕ ತನ್ನ ಪ್ರೇಯಸಿಯೊಂದಿಗೆ ಇದ್ದಾಗ ಹಿಂದೂ ಯುವ ವಾಹಿನಿ ಕಾರ್ಯಕರ್ತರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಆ ನಂತರ ಈ ಜೋಡಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ಹಿಂದೂ ಯುವತಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದ ಮುಸ್ಲಿಂ ಯುವಕ, ಆಕೆಯನ್ನು ಬಲವಂತವಾಗಿ ಮತಾಂತರ ಗೊಳಿಸಲು ಯತ್ನಿಸುತ್ತಿದ್ದ ಎಂದು ಹಿಂದೂ ಯುವವಾಹಿನಿಯ ನರೇಂದ್ರ ಸಿಂಗ್ ತೋಮಾರ್ ಆರೋಪಿಸಿದ್ದಾರೆ.
ಮುಸ್ಲಿಂ ಯುವಕ ಹಿಂದೂ ಯುವತಿ ಜೊತೆ ಸಲ್ಲಾಪದಲ್ಲಿ ತೊಡಗಿದ್ದ, ಜೊತೆಗೆ ಆಕೆಯನ್ನು ಮತಾಂತರಗೊಳಿಸಲು ಯತ್ನಿಸಿದ್ದ, ಆದರೆ ಪೊಲೀಸರು ಇದರ ವಿರುದ್ಧ ಕ್ರಮ ಕೈಗೊಂಡಿಲ್ಲ, ಆತನ ಪೂರ್ವಾಪರ ವಿಚಾರಿಸಿದೇ ಮನೆ ಬಾಡಿಗೆಗೆ ನೀಡಿದ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


