ಐಐಟಿ ಮದ್ರಾಸ್ ಕಟ್ಟಡದಲ್ಲಿ ಬೆಂಕಿ: ತಪ್ಪಿದ ಅನಾಹುತ
ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಮದ್ರಾಸ್ ಕ್ಯಾಂಪಸ್ ನಲ್ಲಿ ಬೆಂಕಿ ಹತ್ತಿ ಉರಿದಿದ್ದು....

Published On :
ಚೆನ್ನೈ: ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಮದ್ರಾಸ್ ಕ್ಯಾಂಪಸ್ ನಲ್ಲಿ ಬೆಂಕಿ ಹತ್ತಿ ಉರಿದಿದ್ದು 5 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಆರಿಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಯಾವುದೇ ಸಾವು-ನೋವುಗಳಾದ ಬಗ್ಗೆ ವರದಿಯಾಗಿಲ್ಲ.
ಶಿಕ್ಷಣ ಸಂಸ್ಥೆ ನಂತರ ಪತ್ರಿಕಾ ಹೇಳಿಕೆ ಹೊರಡಿಸಿ ಐಐಟಿಯ ಕೈಗಾರಿಕಾ ಸಲಹೆ ಮತ್ತು ಪ್ರಾಯೋಜಿತ ಸಂಶೋಧನಾ ಕಟ್ಟಡದ ಮೇಲ್ಮಹಡಿಯಲ್ಲಿ ಬೆಂಕಿ ಹತ್ತಿಕೊಂಡಿತು. ಈ ಸಂದರ್ಭದಲ್ಲಿ ಕಟ್ಟಡದ ಒಳಗೆ ಯಾರೂ ಇರಲಿಲ್ಲ.
ಸಂಸ್ಥೆಯ ದ ಫಿಫ್ತ್ ಎಸ್ಟೇಟ್ ಫೇಸ್ ಬುಕ್ ಪುಟದಲ್ಲಿ, ಬೆಂಕಿ ಎನ್ ಪಿಟಿಇಎಲ್ ಕಚೇರಿಯಲ್ಲಿ ಕಾಣಿಸಿಕೊಂಡು ನಂತರ ಮೇಲ್ಮಹಡಿಗೆ ವ್ಯಾಪಿಸಿತು ಎಂದು ಬರೆಯಲಾಗಿದೆ. ಬೆಂಕಿ ಹತ್ತಿಕೊಳ್ಳುವ 15 ನಿಮಿಷಕ್ಕೆ ಮೊದಲಷ್ಟೇ ಇಲ್ಲಿಂದ ಜನರು ತೆರಳಿದ್ದರು.
ಬೆಂಕಿ ಕಾಣಿಸಿಕೊಳ್ಳಲು ಕಾರಣದ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


