ಶ್ರೀನಗರ ಮರು ಚುನಾವಣೆ: ಈ ವರೆಗೂ ಕೇವಲ ಶೇ.1 ರಷ್ಟು ಮತದಾನ
ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಮರು ಚುನಾವಣೆಯಲ್ಲಿ ಈ ವರೆಗೂ ಶೇ.1 ರಷ್ಟು ಮಾತ್ರ ಮತದಾನ ನಡೆದಿದ್ದು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Published On :
ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಮರು ಚುನಾವಣೆಯಲ್ಲಿ ಈ ವರೆಗೂ ಶೇ.1 ರಷ್ಟು ಮಾತ್ರ ಮತದಾನ ನಡೆದಿದ್ದು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
38 ಮತಗಟ್ಟೆಗಳಲ್ಲಿ ಕಳೆದ ಮೂರು ಗಂಟೆಗಳಿಂದಲೂ ಸಹ ಕೇವಲ ಶೇ.1 ರಷ್ಟು ಮತದಾನ ನಡೆದಿದ್ದು, ಬೆಳಿಗ್ಗೆ 10 ಗಂಟೆ ವರೆಗೆ 34,169 ಮತದಾರರ ಪೈಕಿ ಕೇವಲ 344 ಮತದಾರರು ಮಾತ್ರ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಬುಡ್ಗಾಂ ಹಾಗೂ ಖಾನ್ಸಾಹಿಬ್ ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ 2 ಮತಗಳು ಚಲಾವಣೆಯಾಗಿದೆ ಎಂದು ಚುನಾವಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ತೀವ್ರ ಹಿಂಸಾಚಾರವನ್ನು ಕಂಡಿದ್ದ ಚಾದೂರಾದಲ್ಲಿ 200 ಮತಗಳು ಚಲಾವಣೆಯಾಗಿದ್ದು, ಬೀರ್ವಾ ಕ್ಷೇತ್ರದಲ್ಲಿ 142 ಮತಗಳು ಚಲಾವಣೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


