ಉತ್ತರ ಪ್ರದೇಶ: ಲಖನೌ ನಲ್ಲಿ 6,005 ಬಾಲ ಕಾರ್ಮಿಕರಿಗೆ ತರಬೇತಿ
ಉತ್ತಮ ಉದ್ಯೋಗಗಳಿಗೆ ತಯಾರಾಗಲು ಉತ್ತರ ಪ್ರದೇಶ ಬಾಲ ಕಾರ್ಮಿಕರಿಗೆ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದೆ.

Published On :
ಲಖನೌ: ಉತ್ತಮ ಉದ್ಯೋಗಗಳಿಗೆ ತಯಾರಾಗಲು ಉತ್ತರ ಪ್ರದೇಶ ಬಾಲ ಕಾರ್ಮಿಕರಿಗೆ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದೆ.
ಸರ್ಕಾರದ ಯೋಜನೆಯ ಅಡಿಯಲ್ಲಿ 6,005 ಬಾಲ ಕಾರ್ಮಿಕರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ನಿರ್ದೇಶನದ ಪ್ರಕಾರ ವಿಶೇಷ ತರಬೇತಿ ನೀಡುವ ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುತ್ತದೆ ಎಂದು ಉತ್ತರ ಪ್ರದೇಶದ ಅಧಿಕಾರಿಗಳು ಹೇಳಿದ್ದಾರೆ.
ಬಾಲಕಾರ್ಮಿಕರನ್ನು ಗುರುತಿಸಲು ಲಖನೌ ದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಪುರಸಭೆಯ 110 ವಾರ್ಡ್ ಗಳಲ್ಲಿ, ನಗರ ಪಂಚಾಯಿತಿ, ಗ್ರಾಮೀಣ ಪ್ರದೇಶದ 20 ವಾರ್ಡ್ ಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, 6-14 ವರ್ಷದ ವರೆಗಿನ 6,005 ಬಾಲಕಾರ್ಮಿಕರನ್ನು ಗುರುತಿಸಲಾಗಿದೆ. ಈ ಪೈಕಿ 5,180 ಬಾಲಕಾರ್ಮಿಕರು 9-14 ವರ್ಷದವರಾಗಿದ್ದು, 825 6-8 ವರ್ಷದವರಾಗಿದ್ದಾರೆ.
ಸಮೀಕ್ಷೆಯಲ್ಲಿ ದಾಖಲಾಗಿರುವ ಬಾಲಕಾರ್ಮಿಕರು ಕಸೂತಿ ಕೆಲಸ, ಮನೆ ಕೆಲಸಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಾಲಕಾರ್ಮಿಕರಿಗೆ ಉತ್ತಮ ಉದ್ಯೋಗಗಳಿಗೆ ತಯಾರಾಗಲು ತರಬೇತಿ ನೀಡುವುದು ಉತ್ತರ ಪ್ರದೇಶ ಸರ್ಕಾರದ ಉದ್ದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


