ಕಾಶ್ಮೀರಿ ಯುವಕನನ್ನು ಚಲಿಸುತ್ತಿರುವ ಜೀಪ್ ಮುಂಭಾಗಕ್ಕೆ ಬಿಗಿದ ಸೇನೆ, ವಿಡಿಯೋ ವೈರಲ್
ಕಾಶ್ಮೀರದಲ್ಲಿ ಸೇನಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸುವವರನ್ನು ನಿಗ್ರಹಿಸುವ ಭಾಗವಾಗಿ ಭಾರತೀಯ ಸೇನಾ ಸಿಬ್ಬಂದಿಗಳು ಕಲ್ಲು ತೂರಾಟ ನಡೆಸುವವರನ್ನು ಸೇನಾ ಜೀಪ್ ಗೆ ಬಿಗಿದು ಚಾಲನೆ ಮಾಡಿಕೊಂಡು...

Published On :
ಶ್ರೀನಗರ: ಕಾಶ್ಮೀರದಲ್ಲಿ ಸೇನಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸುವವರನ್ನು ನಿಗ್ರಹಿಸುವ ಭಾಗವಾಗಿ ಭಾರತೀಯ ಸೇನಾ ಸಿಬ್ಬಂದಿಗಳು ಕಲ್ಲು ತೂರಾಟ ನಡೆಸುವವರನ್ನು ಸೇನಾ ಜೀಪ್ ಗೆ ಬಿಗಿದು ಚಾಲನೆ ಮಾಡಿಕೊಂಡು ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಬಗ್ಗೆ ಸೇನೆ ಪ್ರತಿಕ್ರಿಯೆ ನೀಡಿದ್ದು ಸತ್ಯಾಸತ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಹೇಳಿದೆ.
ಕಲ್ಲು ತೂರಾಟ ನಡೆಸಬಾರದು ಎಂಬ ಒಂದೇ ಕಾರಣಕ್ಕೆ ಸೇನೆ ಯುವಕರನ್ನು ಸೇನೆಯ ವಾಹನಕ್ಕೆ ಕಟ್ಟಿರುವುದು ನಿಜಕ್ಕೂ ಆತಂಕಕಾರಿ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿ, ತನಿಖೆಗೆ ಆಗ್ರಹಿಸಿದ್ದರು.
ಯುವಕನನ್ನು ಚಲಿಸುತ್ತಿರುವ ಜೀಪ್ ನ ಮುಂಭಾಗಕ್ಕೆ ಕಟ್ಟಿ, ಕಲ್ಲು ತೂರಾಟಗಾರರು ತಮ್ಮ ಕೆಲಸವನ್ನು ಮುಂದುವರೆಸಿದರೆ ಅವರಿಗೂ ಇದೇ ಗತಿ ಎದುರಾಗುತ್ತದೆ ಎಂಬ ಎಚ್ಚರಿಕೆ ಸಂದೇಶ ರವಾನೆ ಮಾಡಲಾಗಿದೆ ಈ ಬಗ್ಗೆ ತನಿಖೆ ನಡೆಸಬೇಕೆಂದು ಓಮರ್ ಅಬ್ದುಲ್ಲಾ ಆಗ್ರಹಿಸಿದ್ದರು. ಯುವಕನನ್ನು ಜೀಪ್ ಮುಂಭಾಗಕ್ಕೆ ಕಟ್ಟಿ ಎಳೆದೊಯ್ಯುತ್ತಿರುವ ವಿಡಿಯೋ ಬಗ್ಗೆ ಕಾಶ್ಮೀರದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವಿಡಿಯೋ ಬಗ್ಗೆ ಸೇನಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿಕೆ ನೀಡಿದ್ದು, ವಿಡಿಯೋ ಸತ್ಯಾಸತ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


