ಹಳಿತಪ್ಪಿದ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು; ಇಬ್ಬರಿಗೆ ಗಾಯ
ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ...

Published On :
ನವದೆಹಲಿ: ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ.
ರಾಣಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇನೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.
ರೈಲು ಅಪಘಾತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ಯಾವುದೇ ಸಾವುಗಳು ಸಂಭವಿಸಿಲ್ಲ. ಪ್ರಕರಣವನ್ನು ತನಿಖೆಗೆ ಆದೇಶಲಾಗಿದ್ದು, ತಪ್ಪಿತಸ್ಧರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಗಾಯಾಳುಗಳಿಗೆ ರೂ. 50 ಸಾವಿರ ಪರಿಹಾರವನ್ನು ನೀಡಲಾಗುವುದು ಎಂದು ಸುರೇಶ್ ಪ್ರಭು ಅವರು ತಿಳಿಸಿದ್ದಾರೆ.
ಉತ್ತರ ರೈಲ್ವೆ ವಕ್ತಾರ ಉತ್ತರ ರೈಲ್ವೆ ವಕ್ತಾರ ನೀರಜ್ ಶರ್ಮಾ ಮಾತನಾಡಿ, 8 ಬೋಗಿಗಳ ಪೈಕಿ 2 ಬೋಗಿಗಳು ನಾಶವಾಗಿದೆ. ಪ್ರಯಾಣಿಕರ ಸಂಬಂಧಿಕರಿಗಾಗಿ ಈಗಾಗಲೇ ಸಹಾಯವಾಣಿಗಳನ್ನು ತೆರೆಯಲಾಗಿದೆ. ರೈಲು ಹಳಿ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ಮೊರಾದಾಬಾದ್ ಡಿಆರ್'ಎಂ ಪ್ರಮೋದ್ ಕುಮಾರ್ ಸೇರಿದಂತೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯಕೀಯ ತಂಡ ಕೂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ.
ಘಟನೆಯನ್ನು ಸೇರಿದಂತೆ ಉತ್ತರಪ್ರದೇಶ ರಾಜ್ಯದಲ್ಲಿ 1 ತಿಂಗಳಲ್ಲಿ ಎರಡು ರೈಲುಗಳು ಹಳಿತಪ್ಪಿದಂತಾಗಿದೆ. ಮಾರ್ಚ್ 31 ರಂದು ಮಹಾರೋಶ್ಲಾ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ 25 ಜನರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರಪ್ರದೇಶInjuryಗಾಯಹಳಿ ತಪ್ಪಿದ ರೈಲುTrain DerailMeerut-Lucknow Rajya Rani expressಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್\'ಪ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


