ಮಹಾತ್ಮರ ಜನ್ಮದಿನಾಚರಣೆಗಳಿಗೆ ರಜೆ: ಯೋಗಿ ನಂತರ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ವಿರೋಧ
ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡುವುದನ್ನು ವಿರೋಧಿಸಿದ್ದಾರೆ.

Published On :
ಜೈಪುರ: ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಸಹ ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡುವುದನ್ನು ವಿರೋಧಿಸಿದ್ದಾರೆ.
ರಜೆ ನೀಡುವ ಬದಲು ಮಹಾತ್ಮರ ಜನ್ಮದಿನಾಚರಣೆಯಂದು ವಿದ್ಯಾರ್ಥಿಗಳಿಗೆ ಅವರ ಬಗ್ಗೆ ಬೋಧಿಸಬೇಕು ಎಂದು ಕಲ್ಯಾಣ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮರ ಜೀವನಚರಿತ್ರೆ ಬಗ್ಗೆ ಸೆಮಿನಾರ್ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಕಲ್ಯಾಣ್ ಸಿಂಗ್ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಮಹಾತ್ಮರ ಜನ್ಮದಿನಾಚರಣೆಯ ವೇಳೆ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಹೇಳಿದ್ದರು. ಈ ಬೆನ್ನಲ್ಲೇ ರಾಜಸ್ಥಾನ ರಾಜ್ಯಪಾಲ, ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಸಹ ಯೋಗಿ ಆದಿತ್ಯನಾಥ್ ಮಾದರಿಯಲ್ಲೇ ಹೇಳಿಕೆ ನೀಡಿದ್ದು, ಮಹಾತ್ಮರ ಜನ್ಮದಿನಾಚರಣೆಗೆ ರಜೆ ನೀಡಬಾರದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜಸ್ಥಾನರಜೆKalyan Singhಕಲ್ಯಾಣ್ ಸಿಂಗ್birth anniversariesRajasthan GovernorGreat personalitiesholidaysಮಹಾತ್ಮರ ಜನ್ಮದಿನಾಚರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


